ರೈತರೊಂದಿಗೆ ಇಂದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಿಬ್ಬಂದಿಗಳಿಂದಲೂ ಪ್ರತಿಭಟನೆ!

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಜೊತೆಗೆ ಇಂದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಿಬ್ಬಂದಿಯಿಂದಲೂ ಪ್ರತಿಭಟನೆ ನಡೆಯಲಿದೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿಸಬೇಕು, ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುವ ಸಾರಿಗೆ ನೌಕರರು ಕೊರೊನಾದಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಾಗಿ ಸಾರಿಗೆ ಸಚಿವರು ಹೇಳಿದ್ದರು ಆದೇಶವನ್ನು ಅಧಿಕೃತವಾಗಿ ಜಾರಿಗೆ  ತರಬೇಕು. ಸಾಕಷ್ಟು ನೌಕರರಿಗೆ ಡ್ಯೂಟಿ ಸಿಗುತ್ತಿಲ್ಲ, ಡ್ಯೂಟಿ ಸಿಗದೆ ಇದ್ದರೂ ಹಾಜರಾತಿ ನೀಡಬೇಕು. ಹೀಗೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾಜ್ಯದಲ್ಲಿ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಅಧಿಕ ಸಿಬ್ಬಂದಿ ರೈತರ ಜೊತೆಗೆ ಪ್ರತಿಭಟನಾ ಮೆರವಣಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿಸಾರಿಗೆ ಬಸ್ ಗಳ ಓಡಾಟದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಆದರೆ ಸಾರಿಗೆ ಇಲಾಖೆಯಲ್ಲಿ 1 ಲಕ್ಷದ 30 ಸಾವಿರ ಸಿಬ್ಬಂದಿ ಇದ್ದು, ಬಸ್ ಗಳ ಓಡಾಟದಲ್ಲಿ ಯಾವುದೇ ವ್ಯತ್ಯಯ ಆಗಲ್ಲ ಎಂದು ಸಿಬ್ಬಂದಿಯ ಯೂನಿಯನ್ ಮುಂಖಡ ಅನಂತ ಸುಬ್ಬರಾವ್ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights