ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಇಂದು KSRTC, BMTC ಬಸ್ ಸಂಚಾರ‌ ಬಂದ್‌!

ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಪರಗಣಿಸಬೇಕು ಎಂಬ ಬೇಡಿಕೆ ಸೇರಿದಂತೆ ನಾನಾ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿರುವ ಸಾರಿಗೆ ನೌಕರರು ಇಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಮಗಳ ಬಸ್‌ಗಳು ರಸ್ತೆಗಿಳಿಯದೇ ಡಿಪೋಗಳಲ್ಲೇ ನಿಂತಿವೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ನಿಗಮಗಳ ಬಸ್​ಗಳ ಸೇವೆಯನ್ನು ಇಂದು ಮುಂಜಾನೆಯಿಂದಲೇ ಸ್ಥಗಿತಗೊಳಿಸಲಾಗಿದೆ. ಈ ನಾಲ್ಕು ನಿಗಮಗಳಿಂದ 1.30 ಲಕ್ಷ ನೌಕರರಿದ್ದು, ಅವರಲ್ಲಿ ಬಹುತೇಕರು ಇಂದು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ರಾಜ್ಯಾದ್ಯಂತ ಬಸ್​ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಸಾರಿಗೆ ನೌಕರರ ಬೇಡಿಕೆಗಳು: 

* ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಸಬೇಕು.

* ಕೊರೋನಾ ವಾರಿಯರ್ಸ್ ಆಗಿ ಸಾರಿಗೆ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ.

* ಸಾರಿಗೆ ನೌಕರರು ಕೊರೊನಾದಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಾಗಿ ಸಾರಿಗೆ ಸಚಿವರು ಹೇಳಿದ್ದರು, ಆ ಆದೇಶವನಗನು ಅಧಿಕೃತವಾಗಿ ಜಾರಿಗೆ ತರಬೇಕು.

* ಸಾಕಷ್ಟು ನೌಕರರಿಗೆ ಡ್ಯೂಟಿ ಸಿಗುತ್ತಿಲ್ಲ, ಡ್ಯೂಟಿ ಸಿಗದೆ ಇದ್ದರೂ ಹಾಜರಾತಿ ನೀಡಬೇಕು.

ಪ್ರಯಾಣಿಕರ ಪರದಾಟ: 

ಬಸ್‌ ಸಂಚಾರ ಸ್ಥಗಿಗೊಂಡಿರುವುದರಿಂದಾಗಿ ಪ್ರಯಾಣಿಕರು ಬಸ್‌ ನಿಲ್ದಾಣಗಳಲ್ಲೇ ಬಸ್ಸಿಗಾಗಿ ಕಾದು ಕುಳಿತಿದ್ದಾರೆ. ಸರ್ಕಾರ ಮತ್ತು ಸಾರಿಗೆ ನೌಕರರ ಮಧ್ಯೆ ಪ್ರಯಾಣಿಕರ ನೋವನ್ನು ಕೇಳೋರಿಲ್ಲ ಎಂದು ಪ್ರಯಾಣಿಕರು ದೂರುತ್ತಿದ್ದಾರೆ.

ಬಿಎಂಟಿಸಿ ಬಸ್ ಇಲ್ಲದ ಕಾರಣ ಆಟೋ-ಟ್ಯಾಕ್ಸಿ ಚಾಲಕರು ದಂಧೆಗಿಳಿದಿದ್ದಾರೆ. ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಹೀಗಾಗಿ ಬ್ಯಾಟರಾಯನಪುರ ಪೊಲೀಸರು ವಾರ್ನಿಂಗ್ ಕೊಟ್ಟಿದ್ದು, ಹೆಚ್ಚು ಹಣ ವಸೂಲಿ ಮಾಡಿದರೆ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.

ನಾನಾ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದ ಸಾರಿಗೆ ನೌಕರರು ನಿನ್ನೆ ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗಿದ್ದರೂ, ಆದರೂ ಅವರ ಬೇಡಿಕೆಗೆ ಸರ್ಕಾರ ಸ್ಪಂಧಿಸಿಲ್ಲ. ಹಾಗಾಗಿ ಇಂದು ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಿ ಮುಷ್ಕರಕ್ಕಿಳಿದಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿ ಬೇನಾಮಿ ಆಸ್ತಿ ಹೊಂದಿದ್ದಾರೆ; ಅದರ ರಕ್ಷಣೆಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights