ನಡ್ಡಾ ಮೇಲಿನ ದಾಳಿ: ಬಂಗಾಳದಲ್ಲಿ ರಾಜಕೀಯ ಲಾಭಕ್ಕೆ ಬಳಿಸಿಕೊಳ್ಳುತ್ತಿದೆ ಬಿಜೆಪಿ!
2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹಾಗಾಗಿ ಬಿಜೆಪಿ ರಾಷ್ಟ್ರ ನಾಯಕರ ದಂಡು ಬಂಗಾಳಕ್ಕೆ ಭೇಟಿ ನೀಡುತ್ತಲೇ ಇದೆ. ಮೊನ್ನೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ನೀಡದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಹಲ್ಲೆ ನಡೆಸಾಗಿದ್ಉದ, ಈ ಘಟನೆಯನ್ನು ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ.
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಸಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿ ರಾಜಕಾರಣದಲ್ಲಿ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಬಿಂಬಿಸಲು ಮುಂದಾಗಿದೆ. ಈ ಬಗ್ಗೆ ರಾಜ್ಯದ ಜನರಲ್ಲಿ ಅಭಿಪ್ರಾಯ ಸೃಷ್ಟಿಗೆ ಜೆಪಿ ನಡ್ಡಾ ಕಾರಿನ ಮೇಲಿನ ದಾಳಿಯನ್ನು ಬಳಸಿಕೊಳ್ಳುತ್ತಿದೆ.
‘ನಡ್ಡಾ ಮತ್ತು ಅವರ ಬೆಂಗಾವಲು ಪಡೆ ಸಾಗುವ ದಾರಿಯ ಅಂಚುಗಳಲ್ಲಿ ಟಿಎಂಸಿ ಉದ್ದೇಶಪೂರ್ವಕವಾಗಿ ಎತ್ತರದ ಜಗುಲಿಗಳನ್ನು ನಿರ್ಮಿಸಿತ್ತು. ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದೆ. ಈ ಹಿಂದೆ ಬಿಜೆಪಿ ಅಧ್ಯಕ್ಷರ ಭದ್ರತೆಯಲ್ಲಿ ದೋಷವಾಗಿತ್ತು. ಹಾಗಾಗಿ ಈ ಬಾರಿ ಸಾಕಷ್ಟು ವ್ಯವಸ್ಥೆಗಳ ಅಗತ್ಯವಿದೆ ಎಂದು ಹೇಳಿದ್ದೆ. ಆದರೆ, ಬಂಗಾಳದಲ್ಲಿ ಸಂಪೂರ್ಣ ಅರಾಜಕತೆ ಇದೆ,’ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಆರೋಪಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಇದನ್ನೂ ಓದಿ: ಪ. ಬಂಗಾಳದಲ್ಲಿ ವೈರಿ ಯಾರು? BJPಯೋ-TMCಯೋ? ಗೊಂದಲದಲ್ಲಿ ಎಡರಂಗ!
ಜೆಪಿ ನಡ್ಡಾ ಕಾರಿನ ಮೇಲಿನ ದಾಳಿಯ ವಿಚಾರದಲ್ಲಿ ದೆಹಲಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಕೃಹ ಸಚಿವಾಲಯ ಬಂಗಾಳ ಪೊಲೀಸ್ ಮಹಾನಿರ್ದೇಶಕ (ಡಿಜಿ) ವೀರೇಂದ್ರ ಮತ್ತು ಕಾರ್ಯದರ್ಶಿ ಅಲಫೋನ್ ಬಂಡೋಪಾಧ್ಯಾಯ ಅವರಿಗೆ ಸಮನ್ಸ್ ನೀಡಿದ್ದು, ಬಂಗಾಳ ಸರ್ಕಾರ ಅಧಿಕಾರಿಗಳನ್ನು ಕಳಿಸುವುದಿಲ್ಲ ಎಂದು ಹೇಳಿದೆ.
ಕೇಂದ್ರ ಸರ್ಕಾರವು ರಾಜ್ಯದ ಆಡಳಿತದ ಮೇಲೆ ನಿಯಂತ್ರಣ ಸಾಧಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಂಚು ನಡೆಸುತ್ತಿದೆ. ಬಿಜೆಪಿ ರಾಜಕೀಯ ದುರುದ್ದೇಶದ ನಡೆಗಳನ್ನು ಅನುಸರಿಸುತ್ತದೆ. ಅದಕ್ಕೆ ರಾಜ್ಯದಲ್ಲಿ ಆಸ್ಪದ ನೀಡುವುದಿಲ್ಲ ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆಲವೇ ದಿನಗಳಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗಿರುವ ಹೊತ್ತಿನಲ್ಲೇ ನಡ್ಡಾ ಮೇಲೆ ನಡೆದ ದಾಳಿಯ ರಾಜಕೀಯ ಲಾಭ ಪಡೆಯಲು ಬಿಜೆಪಿಯು ತನ್ನ ಉನ್ನತ ಮಟ್ಟದ ನಾಯಕರನ್ನು ಬಂಗಾಳಕ್ಕೆ ನಿಯೋಜಿಸುವ ಮುನ್ಸೂಚನೆಗಳು ದೊರೆತಿವೆ. ಅಮಿತ್ ಶಾ ತಮ್ಮ ಭೇಟಿಯ ವೇಳೆ ಈ ವಿಚಾರವನ್ನೇ ಪ್ರಸ್ತಾಪಿಸಿ ಟಿಎಂಸಿ ವಿರುದ್ಧ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಾಸ್ತವದಲ್ಲಿ ಮಮತಾ ಬ್ಯಾನರ್ಜಿ ಅವರು ‘ಉತ್ತಮ ಆಡಳಿತ ಮತ್ತು ಅಭಿವೃದ್ಧಿ’ಯ ಆಧಾರದಲ್ಲಿಯೇ ಚುನಾವಣೆಯ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ.
ಇದನ್ನೂ ಓದಿ: ಪ. ಬಂಗಾಳ ಚುನಾವಣೆ: TMCಯಲ್ಲಿ ಭಿನ್ನಾಭಿಪ್ರಾಯ; BJP ಗೆಲುವಿಗೆ ವರದಾನ?

