ನಕಲಿ ಟಿಆರ್‌ಪಿ ಹಗರಣ: ರಿಪಬ್ಲಿಕ್‌ ಟಿವಿ ಸಿಇಒ ವಿಕಾಸ್ ಖಂಚಂದಾನಿ ಬಂಧನ!

ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿ ಅವರನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಿಪಬ್ಲಿಕ್ ಟಿವಿ‌ ಮತ್ತು ಅದರ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ರಕ್ಷಣೆ ಕೋರಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ARG ಔಟ್‌ಲಿಯರ್ ಮೀಡಿಯಾ ಪ್ರೈವೇಟ್‌ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೆಲವು ದಿನಗಳ ಹಿಂದೆ ವಜಾಗೊಳಿಸಿದೆ. ಅರ್ಜಿ ವಜಾಗೊಂಡ ಬೆನ್ನಲ್ಲೇ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯನ್ನು ಬಂಧಿಸಲಾಗಿದ್ದು, ಇದು 13ನೇ ಬಂಧನವಾಗಿದೆ.

ಹನ್ಸಾ ಸಂಶೋಧನೆಯ ಅಧಿಕಾರಿ ನಿತಿನ್ ಡಿಯೋಕರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಟಿಆರ್‌ಪಿ ತಿರುಚಿದ ಪ್ರಕರಣದಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಿದ್ದರು.

ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ರಿಪಬ್ಲಿಕ್ ಟಿವಿ ಸೇರಿದಂತೆ ಮೂರು ಚಾನೆಲ್‌ಗಳು ಟಿಆರ್‌ಪಿಯನ್ನು ದುರುದ್ದೇಶದಿಂದ ತಿರುಚಿವೆ ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾ ವಿರುದ್ಧ ಪರ್ಯಾಯ ಕಂಡುಕೊಂಡ ಪಂಜಾಬ್ ಯುವಜನರು!

“ರಿಪಬ್ಲಿಕ್ ಸಲ್ಲಿಸಿದ್ದ ಅರ್ಜಿಯಲ್ಲಿನ ಮನವಿಗಳು ಮಹದಾಸೆಯಿಂದ ಕೂಡಿದೆ. ಮಹಾರಾಷ್ಟ್ರ ಪೊಲೀಸರು ಚಾನೆಲ್‌ನ ಯಾವುದೇ ಉದ್ಯೋಗಿಯನ್ನು ಬಂಧಿಸಬಾರದು ಮತ್ತು ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ನೀವು ಬಯಸುತ್ತೀರಿ. ನೀವು ಈ ಮನವಿಯನ್ನು ಕೈಬಿಡುವುದು ಉತ್ತಮ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಕಳೆದ ವಾರ ಆದೇಶಿಸಿದ್ದರು.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲೀಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿದೆ.


ಇದನ್ನೂ ಓದಿ: ರೈತರು ಮತ್ತು ‘ಗೋದಿ ಮೀಡಿಯಾ’: ನ್ಯೂಸ್‌ ಚಾನೆಲ್‌ಗಳ ಧೋರಣೆಗಳೇನು ಓದಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights