ಸಾರಿಗೆ ನೌಕರರ ಹೋರಾಟಕ್ಕೆ ಮಣಿದ ಸರ್ಕಾರ; ರಾತ್ರಿಯಿಂದಲೇ ಬಸ್‌ ಸಂಚಾರ ಆರಂಭ

ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ ನಂತರ, ಸಾರಿಗೆ ನೌಕರರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದು, ಇಂದು ರಾತ್ರಿಯಿಂದ ಬಸ್‌ ಸಂಚಾರ ಎಂದಿನಂತೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

ತಮ್ಮನ್ನು ಸರ್ಕಾರಿ ನೌಕರನ್ನಾಗಿ ಪರಿಗಣಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದರು.

ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಸಾರಿಗೆ ನೌಕರರ ನಡುವೆ ಎರಡು ಸುತ್ತಿನ  ಸಭೆ ನಡೆದಿದ್ದು, ಸಭೆಯಲ್ಲಿ ಸಮಿತಿಯೊಂದನ್ನು ರಚಿಸಿ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಈ ಬೆನ್ನಲ್ಲೇ ನೌಕರರು ಪ್ರತಿಭಟನೆ ಹಿಂಪಡೆದಿದ್ದಾರೆ.

ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದರು. ಹಲವು ಬಾರಿ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ ವಿಫಲವಾಗಿತ್ತು. ಇದರ ಬೆನ್ನಲ್ಲೇ ಸಾರಿಗೆ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.


ಇದನ್ನೂ ಓದಿ: ಬಿಕ್ಕಟ್ಟು ನಿರ್ವಹಿಸುವುದು ಸದನದಲ್ಲಿ ‘ರೋಮಾಂಚನದ ಚಿತ್ರ’ ನೋಡಿದಂತಲ್ಲ; ಸವದಿಗೆ ಕಾಂಗ್ರೆಸ್‌ ಟಾಂಗ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights