ಬಿಜೆಪಿ ವಿರುದ್ಧ ಪ್ರತಿಭಟನೆ; ಆಮ್‌ ಆದ್ಮಿ ಪಕ್ಷದ 04 ಶಾಸಕರ ಬಂಧನ!

ದೆಹಲಿಯ ಪುರಸಭೆಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಬಿಜೆಪಿ ವಿರುದ್ದ ಅಮಿತ್‌ ಶಾ ನಿವಾಸದ ಎದುರು ಪ್ರತಿಭಟನೆ ನಡೆಸಲು ಹೊರಟ್ಟಿದ್ದ ಆಮ್‌ ಅದ್ಮಿ ಪಕ್ಷದ ನಾಲ್ವರು ಶಾಸಕರು ಸೇರಿದಂತೆ ಹಲವು ಕಾರ್ಯಕರ್ತರನ್ನು ಮಾರ್ಗಮಧ್ಯೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಆಡಳಿತವಿರುವ ಉತ್ತರ ದೆಹಲಿ ಹಾಗೂ ದಕ್ಷಿಣ ದೆಹಲಿ ಪುರಸಭೆ ನಿಗಮಗಳಲ್ಲಿ 2,400 ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿದೆ. ಈ ಸಂಬಂಧ ಸಿಬಿಐ ತನಿಖೆಯಾಗಬೇಕು ಎಂದು ಎಎಪಿ ಶಾಸಕರು ಮತ್ತು ಮುಖಂಡರು ಆಗ್ರಹಿಸಿದ್ದಾರೆ. ತಮಮ ಬೇಡಿಕೆ ಈಡೇರುವವರೆಗೂ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಮುಂದಾಗಿದ್ದರು.

ಗೃಹ ಸಚಿವರ ನಿವಾಸಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯದಲ್ಲಿ ಆಮ್ ಆದ್ಮಿಯ ರಾಘವ್ ಚಂಢಾ ಹಾಗೂ ಇನ್ನಿತರ 9 ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಗುಂಪು ಕಟ್ಟಿಕೊಂಡು ಜನ ಸೇರುವ ಎಲ್ಲಾ ಕಾರ್ಯಕ್ರಮಗಳಿಗೂ ಡಿ.31 ವರೆಗೂ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಎಎಪಿ ಮುಖಂಡ ರಾಘವ್ ಚಂಢಾಗೆ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದೆವು. ಅದರೂ, ಅವರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆ ಕಾರಣದಿಂದಾಗಿ ಅವರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ವಿರುದ್ಧ ಆಂದೋಲನ; ದೇಶಾದ್ಯಂತ 100 ಪತ್ರಿಕಾಗೋಷ್ಟಿ, 700 ರೈತ ಸಭೆಗೆ ಮುಂದಾದ ಬಿಜೆಪಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights