ಸಾವಿತ್ರಿ ಬಾ ಪುಲೆ ಜನ್ಮದಿನದಂದು ಪತ್ರಿವರ್ಷ ‘ಸಾವಿತ್ರಿ ಉತ್ಸವ’ ಆಯೋಜನೆ: ಮಹಾರಾಷ್ಟ್ರ ಸರ್ಕಾರ

ಶೋಷತ ಸಮುದಾಯ ಮತ್ತು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿತಮ್ಮ ಜೀವನವನ್ನೇ ಮುಡಿಪಿಟ್ಟಿದ್ದ ಅಕ್ಷದ ಅವ್ವ, ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು (ಜನವರಿ 3) ಪ್ರತಿ ವರ್ಷ ‘ಸಾವಿತ್ರಿ ಉತ್ಸವ’ ನಡೆಸುವುದಾಗಿ ಮಹಾರಾಷ್ಟ್ರ ಮೈತ್ರಿ ಸರ್ಕಾರ  ಘೋಷಿಸಿದೆ.

‘ಸಾವಿತ್ರಿಬಾಯಿ ಫುಲೆ ಅವರು ಸಮಾಜ ಸುಧಾರಣೆಗಾಗಿ ನಡೆಸಿದ ಹೋರಾಟ, ಅವರ ಸಾಧನೆಯನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಪತ್ರಿವರ್ಷ ಅವರ ಜನ್ಮದಿನದಂದು ರಾಜ್ಯಾದ್ಯಂತ ಸಾವಿತ್ರಿ ಉತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

1831ರ ಜನವರಿ 3ರಂದು ಜನಿಸಿದ ಸಾವಿತ್ರಿಬಾಯಿ ಫುಲೆ, ಮಹಿಳೆಯರ ಸಬಲೀಕರಣ, ಶಿಕ್ಷಣಕ್ಕಾಗಿ ಪತಿ ಜ್ಯೋತಿಬಾ ಫುಲೆ ಅವರೊಂದಿಗೆ ಅವರು ಹೋರಾಡಿದರು. ಅದರಲ್ಲೂ, ಲಿಂಗ ಮತ್ತು ಜಾತಿ ಆಧಾರದಲ್ಲಿ ಸಮಾಜದಲ್ಲಿ ನಡೆಯುತ್ತಿದ್ದ ತಾರತಮ್ಯವನ್ನು ನಿರ್ಮೂಲನೆ ಮಾಡಲು ಅವರು ನಡೆಸಿದ ಹೋರಾಟ ಅವಿಸ್ಮರಣೀಯ ಎಂದು ಸಚಿವೆ ಯಶೋಮತಿ ಠಾಕೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಪರಿಷತ್ ಚುನಾವಣೆ: BJPಗೆ ಭಾರೀ ಮುಖಭಂಗ; ಗೆಲುವು ಸಾಧಿಸಿದ ಮಹಾ ವಿಕಾಸ್ ಅಘಾಡಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights