ಜೆಡಿಎಸ್‌ನಲ್ಲಿ ಭುಗಿಲೆದ್ದ ಅಸಮಾಧಾನ; ಗ್ರಾಮ ಪಂ. ಚುನಾವಣೆಯಿಂದ ದೂರ ಉಳಿದ ಜಿಟಿಡಿ!

ಜೆಡಿಎಸ್‌ ಪಕ್ಷದಲ್ಲಿ ಅಸಮಾಧಾನದ ಕಾವು ಎಂದಿಗೂ ಮುಂದುವರೆಯುತ್ತಲೇ ಇದೆ. ಹಲವಾರು ಜೆಡಿಎಸ್‌ ಮುಖಂಡರು ಪಕ್ಷದ ಮೇಲೆ ಮುನಿಸಿಕೊಂಡು ಪಕ್ಷ ತೊರೆದಿರುವ ಉದಾಹರಣೆಗಳು ಸಾಕಷ್ಟಿವೆ. ಈ ನಡುವೆ, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಕೂಡ ಪಕ್ಷದ ಮೇಲೆ ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಗ್ರಾಮ ಪಂಚಾಯತಿ ಚುನಾವಣೆಗಳು ಸಮೀಪಿಸುತ್ತಿದ್ದು, ಚುನಾವಣೆಯ ತಾಯಾರಿಗಾಗಿ ನಡೆದ ಪೂರ್ವಭಾವಿ ಸಭೆಗೆ ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರಿಂದ ಆಹ್ವಾನ ಬಂದಿಲ್ಲ ಎಂದು ಹೇಳಿರುವ ಜಿಟಿಡಿ, ಪಕ್ಷ ಹಾಗೂ  ಪಕ್ಷ ಹಾಗೂ ಅದರ ಮುಖಂಡರಿಂದ ಅಂತರ ಕಾಪಾಡಿಕೊಳ್ಳುವ ಪ್ರಯತ್ನಸುತ್ತಿದ್ದಾರೆ.

ಭಾನುವಾರ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಗಾಗಿನ ಕಾರ್ಯಕರ್ತರ ಪೂರ್ವಸಿದ್ಧತಾ ಸಭೆಯಿಂದ ಅವರು ದೂರ ಉಳಿದಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರಿಂದ ಯಾವುದೇ ಆಹ್ವಾನ ಅಥವಾ ಕರೆ ಬಂದಿಲ್ಲ. “ಗ್ರಾಮ ಪಂಚಾಯತ್ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯುವುದಿಲ್ಲ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಯಾರ ಕುರಿತು ಪ್ರಚಾರ ಮಾಡುವ ಮೂಲಕ ಜನರನ್ನು ವಿಭಜಿಸಲು ನಾನು ಬಯಸುವುದಿಲ್ಲ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನನ್ನ ಯಾವ ಪಾತ್ರವೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆಯೂ ನಡೆಯಲಿದ್ದು, ಅದಕ್ಕಾಗಿ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ನಾಯಕರ ಉಸ್ತುವಾರಿ ನೇಮಕ ಮಾಡಲಾಗಿದೆ. ಇದಾದ ನಂತರ, ಜಿಟಿಡಿ ಬೇಸರಗೊಂಡಿದ್ದಾರೆ ಎಂಧು ಹೇಳಲಾಗಿದೆ.


ಇದನ್ನೂ ಓದಿ: ಜೆಡಿಎಸ್ ಮತ್ತು ಬಿಜೆಪಿಯದ್ದು ಪ್ರಕೃತಿ ಸಹಜ ಸಂಬಂಧ; ಜಗದೀಶ್‌ ಶೆಟ್ಟರ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights