ರಾಜಸ್ಥಾನ ಚುನಾವಣೆ: ಆಡಳಿತಾರೂಢ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ; BJPಗಿಂತ ಸ್ವತಂತ್ರರೇ ಹೆಚ್ಚು ಗೆಲುವು!

ರಾಜಸ್ಥಾನದ 50 ನಗರ ಸ್ಥಳೀಯ ಸಂಸ್ಥೆಗಳ 1,775 ವಾರ್ಡ್ ಕೌನ್ಸಿಲರ್ ಸ್ಥಾನಗಳ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಗಿದ್ದು, ಆಡಳಿತಾರೂಢ ಕಾಂಗ್ರೆಸ್ 620, ಬಿಜೆಪಿ 548 ಮತ್ತು 595 ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ರಾಜಸ್ಥಾನದ 12 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಏಳು ಅಭ್ಯರ್ಥಿಗಳು, ಸಿಪಿಐ ಮತ್ತು ಸಿಪಿಐ(ಎಂ) ತಲಾ ಇಬ್ಬರು ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ)ದ ಒಬ್ಬರು ಗೆದ್ದಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಪರಿಷತ್ ಚುನಾವಣೆ: BJPಗೆ ಭಾರೀ ಮುಖಭಂಗ; ಗೆಲುವು ಸಾಧಿಸಿದ ಮಹಾ ವಿಕಾಸ್ ಅಘಾಡಿ!

ಚುನಾವಣೆಗೆ 2,622 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು, ಒಟ್ಟು 14.32 ಲಕ್ಷ ಮತದಾರರು ತಮ್ಮ ಪ್ರತಿನಿಧಿಗಳನ್ನು ಚಲಾಯಿಸಲು ಅರ್ಹರಾಗಿದ್ದರು ಮತ್ತು 7,249 ಅಭ್ಯರ್ಥಿಗಳು ಕಣದಲ್ಲಿದ್ದರು.

ಈ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನದ ಚುನಾವಣೆಯ ಅಧಿಸೂಚನೆಯನ್ನು ಇಂದು ಹೊರಡಿಸಲಾಗುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 20 ರಂದು ಮತ್ತು ಉಪಾಧ್ಯಕ್ಷ ಹುದ್ದೆಗೆ ಡಿಸೆಂಬರ್ 21 ರಂದು ಮತದಾನ ನಡೆಯಲಿದೆ ಎನ್ನಲಾಗಿದೆ.


ಇದನ್ನೂ ಓದಿ: ರಾಜಸ್ಥಾನ ಗ್ರಾಮ ಪಂ. ಮತ್ತು ಜಿಲ್ಲಾ ಮಂಡಳಿ ಚುನಾವಣೆ: ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಬಿಜೆಪಿ; ಕಾಂಗ್ರೆಸ್‌ಗೆ ನಿರಾಸೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights