ಮಾಜಿ ಸಚಿವೆ, ಕಾಂಗ್ರೆಸ್ ನಾಯಕಿ ರೇಣುಕಾ ರಾಜೇಂದ್ರನ್ ವಿಧಿವಶ!
ಮಾಜಿ ಸಚಿವೆ, ಕಾಂಗ್ರೆಸ್ ಪಕ್ಷದ ನಾಯಕಿ ರೇಣುಕಾ ರಾಜೇಂದ್ರನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಕೋಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ರೇಣುಕಾ ಅವರಿಗೆ ನಿನ್ನೆ ಮಧ್ಯಾಹ್ನ ಹೃದಯಾಘಾತವಾಗಿತ್ತು. ಕೂಡಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಸರ್ಕಾರದಲ್ಲಿ 1977ರಿಂದ 1982ರವರೆಗೆ ರೇಷ್ಮೆ, ಕ್ರೀಡೆ ಮತ್ತು ಯುವಜನ ಸೇವೆ ಹಾಗೂ ಸಣ್ಣ ಕೈಗಾರಿಕಾ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ: ಬಾಯ್ಕಾಟ್ ಅಂಬಾನಿ-ಅದಾನಿ; ಕಾರ್ಪೊರೇಟ್‌ಗಳನ್ನು ಸಮರ್ಥಿಸಿಕೊಳ್ಳುತ್ತಿರುವುದೇಕೆ ಸುವರ್ಣ ನ್ಯೂಸ್?