ಕಾದು ಕಾದು ಸುಸ್ತಾದ ಸಚಿವಾಕಾಂಕ್ಷಿ ಶಾಸಕರಿಗೆ ಯಡಿಯೂರಪ್ಪರಿಂದ ಗಿಫ್ಟ್..!

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾದು ಕಾದು ಸುಸ್ತಾದ ಶಾಸಕರಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.

ಇಂದು ನಾಳೆ ಎನ್ನುತ್ತಲೇ ಸಚಿವ ಸಂಪುಟ ವಿಸ್ತರಣೆಗೆ ಕಾಲವೇ ಕೂಡಿ ಬರುತ್ತಿಲ್ಲ. ಹೈಕಮಾಂಡ ಒಪ್ಪಿಗೆ ಇಲ್ಲದೆ ಸಚಿವ ಸಂಪುಟ ವಿಸ್ತರಣೆ ಮಾಡುವಂತಿಲ್ಲ. ಸಚಿವರಾಗುವ ಕನಸು ಕಾಣುತ್ತಿರುವ ವಲಸೆ ಕಾಂಗ್ರೆಸ್ ಕರ ಸಮಾಧಾನಕ್ಕಾಗಿ ಸಿಎಂ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.

ಹೌದು… 13 ಜನ ಬಿಜೆಪಿ ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನವನ್ನು ನೀಡುವಂತೆ ಆದೇಶಿಸಿದ್ದಾರೆ. ಈ ಶ್ರೇಣಿಯು ಕ್ಯಾಬಿನೆಟ್ ಮಂತ್ರಿಯ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಯಾವುದೇ ಸ್ಥಾನಮಾನವಿಲ್ಲದೇ ಇರುವ ಶಾಸಕರನ್ನು ಬಿಜೆಪಿ ಶಾಸಕರು ಎಂದು ಗುರುತಿಸುವ ಸಲುವಾಗಿ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದೇ ವೇಳೆ 14ನೇ ನೇಮಕಾತಿಯಾಗಿ ನಿವೃತ್ತ ಮಾಹಿತಿಇ ವಿಭಾಗದ ಅಧಿಕಾರಿಯೊಬ್ಬರನ್ನು ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.  ಕ್ಯಾಬಿನೆಟ್ ಶ್ರೇಣಿಯೊಂದಿಗೆ ಇತರ ನಾಲ್ವರು ಶಾಸಕರನ್ನು ಇತರ ಮಂಡಳಿಗಳು ಮತ್ತು ನಿಗಮಗಳಿಗೆ ನೇಮಕ ಮಾಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.