ರೈತ ಪ್ರತಿಭಟನೆ ಬಗೆಗಿನ ಚರ್ಚೆಯಿಂದ ತಪ್ಪಿಸಿಕೊಳ್ಳಲು ಅಧಿವೇಶನ ರದ್ದು: ಸಂಜಯ್ ರಾವತ್‌

ಕೃಷಿ ಮಸೂದೆಗಳ ವಿರುದ್ದ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮೇಲಿನ ಚರ್ಚೆಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಸರ್ಕಾರ ಸಂಸತ್‌ ಅಧಿವೇಶನವನ್ನು ರದ್ದು ಮಾಡಿದೆ ಎಂದು ಶಿವಸೇನಾ ಮುಖಂಡ ಸಂಜಯ್‌ ರಾವತ್‌ ಆರೋಪಿಸಿದ್ದಾರೆ.

‘ಚರ್ಚೆ, ಸಂಸತ್‌ ಅಧಿವೇಶನವನ್ನು ನಡೆಸುವ ಬಗ್ಗೆ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಇಷ್ಟ ಇಲ್ಲವೆಂದಾದ ಮೇಲೆ ₹ 1,000 ಕೋಟಿ ವೆಚ್ಚ ಮಾಡಿ ಸೆಂಟ್ರಲ್‌ ವಿಸ್ತಾ ನಿರ್ಮಾಣ ಮಾಡುವುದಾದರೂ ಏಕೆ?’ ಎಂದು ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ಬರೆದಿರುವ ಅಂಕಣದಲ್ಲಿ ಪ್ರಶ್ನಿಸಿದ್ದಾರೆ.

‘ಈಗಿರುವ ಸಂಸತ್‌ ಭವನ ಸದೃಢವಾಗಿಯೇ ಇದೆ. ಇನ್ನೂ 50-75 ವರ್ಷಗಳ ಕಾಲ ಈಗಿರುವ ಕಟ್ಟಡದಲ್ಲಿಯೇ ಸಂಸತ್‌ನ ಕಾರ್ಯಕಲಾಪಗಳನ್ನು ನಡೆಸಬಹುದು’ ಎನ್ನುವ ಮೂಲಕ ಅವರು ನೂತನ ಸಂಸತ್‌ ಭವನ ನಿರ್ಮಿಸುವ ಕೇಂದ್ರದ ನಿರ್ಧಾರವನ್ನು ಟೀಕಿಸಿದ್ದಾರೆ.

‘ನಮ್ಮ ಹಿರಿಯರು ಪ್ರಾರಂಭಿಸಿದ ಪರಂಪರೆಯನ್ನು ನಾಶಮಾಡಿ, ಅವರ ಕೊಡುಗೆಗಳನ್ನು ಮರೆಮಾಚುವುದು, ತಮ್ಮ ವರ್ಚಸ್ಸನ್ನು ಬೆಳೆಸಿಕೊಳ್ಳುವ ಸಲುವಾಗಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವುದನ್ನು ಅತಿಯಾದ ಪ್ರಜಾತಂತ್ರ ಎಂದು ಯಾರೂ ಯೋಚಿಸುವುದಿಲ್ಲ’ ಎಂದೂ ಅವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಸಂಸತ್‌ ಚಳಿಗಾಲದ ಅಧಿವೇಶನ ರದ್ದು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights