ರಾಜ್ಯ ಬಿಜೆಪಿ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಬೀದಿಗಳಿದಿದ್ದಾರೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ. ತರಗತಿಗಳು ನಡೆಯದೇ ಇದ್ದರೂ ಖಾಸಗೀ ಶಾಲೆಗಳು ಪೋಷಕರಿಂದ ಪೂರ್ಣ ಶುಲ್ಕ ವಸೂಲಿ ಮಾಡುತ್ತಿವೆ. ಇದಕ್ಕಾಗಿ ಆನ್‌ಲೈಲ್‌ ತರಗತಿಗಳನ್ನು ಸ್ಥಗಿತಗೊಳಿಸಿ ಬ್ಲಾಕ್‌ಮೇಲ್‌ ಮಾಡುತ್ತಿವೆ. ಸರ್ಕಾರ ಖಾಸಗೀ ಶಾಲೆಗಳೊಂದಿಗೆ ಶಾಮೀಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಸಿಎಂ ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರೇ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ ಎಂದು ಆರೋಪಿಸಿದ್ದಾರೆ.

ತರಗತಿಗಳು ನಡೆಯದೆ ಇದ್ದರೂ ಬೋದನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳುಬೆದರಿಕೆಗೆ ಜಗ್ಗುತ್ತಿಲ್ಲ. ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ಷಾಮೀಲಾಗಿದೆ ಎಂದಿದ್ದಾರೆ.

ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವ ಸುರೇಶ್‌ ಕುಮಾರ್ ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. 


ಇದನ್ನೂ ಓದಿ: ಜನವರಿ ಒಂದರಿಂದ ಶಾಲಾ-ಕಾಲೇಜ್ ಆರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್…!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights