ದೇಶಾದ್ಯಂತ ತಪ್ಪದ ಕೊರೊನಾ ಹಾವಳಿ : ಹೊಸದಾಗಿ 24,337 ಕೇಸ್ – 333 ಸಾವು!

ದೇಶಾದ್ಯಂತ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 24,337 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 333 ಜನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗೆ ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳು 1,00,55,560 ಕ್ಕೆ ಏರಿದ್ದು. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 96,06,111 ಆಗಿದೆ. ದೇಶದಲ್ಲಿ 3,03,639 ಸಕ್ರಿಯ ಕೊರೊನಾವೈರಸ್ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಪ್ರಕರಣಗಳು ಆಗಸ್ಟ್ 7 ರಂದು 20 ಲಕ್ಷ, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ ದಾಟಿದೆ. ಇದು ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ, ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ದಾಟಿದೆ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಕಾರ, ಡಿಸೆಂಬರ್ 20 ರವರೆಗೆ 16,20,98,329 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 9,00,134 ಮಾದರಿಗಳನ್ನು ಭಾನುವಾರ ಪರೀಕ್ಷಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights