ಹಿರಿಯ ಕಾಂಗ್ರೆಸ್‌ ಮುಖಂಡ ಮೋತಿಲಾಲ್ ವೋರಾ ನಿಧನ!

ಹಿರಿಯ ಕಾಂಗ್ರೆಸ್ ಮುಖಂಡ ಮೋತಿಲಾಲ್ ವೋರಾ ಅವರು ಸೋಮವಾರ ನಿಧನರಾಗಿದ್ದಾರೆ. “ಕಾಂಗ್ರೆಸ್ಸಿನ ಕಟ್ಟಾಳು ಮತ್ತು ಮಾನವತಾವಾದಿ  ವೋರಾ ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಪ್ರೀತಿ ಮತ್ತು ಸಂತಾಪಗಳು” ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಹಿರಿಯ ನಾಯಕ, ಅಸಾಧಾರಣ ವ್ಯಕ್ತಿತ್ವವುಳ್ಳ ವೋರಾ ಅವರು ತಮ್ಮ ಜೀವನವನ್ನು ಕಾಂಗ್ರೆಸ್‌ಗಾಗಿ ಸಮರ್ಪಿಸಿದ್ದಾರೆ ಎಂದು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

“ಅವರು ತಮ್ಮ ಕೊನೆಯ ಉಸಿರಿರುವವರೆಗೂ ಪಕ್ಷಕ್ಕಾಗಿ ದುಡಿದರು. ಅವರ ನಿಧನವು ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಯೋಗಿ ಸರ್ಕಾರದ ಪಾತ್ರ  ಬಹಿರಂಗವಾಗಿದೆ: ಅಖಿಲೇಶ್ ಯಾದವ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights