ಕೊರೊನಾ ಆತಂಕದ ನಡುವೆ ಇಂದು ಗ್ರಾಮ್ ಪಂಚಾಯತ್ ಮೊದಲ ಹಂತದ ಚುನಾವಣೆ ಆರಂಭ..!

ಬಹು ನಿರೀಕ್ಷಿತ ಗ್ರಾಮ ಪಂಚಾಯಿತಿ ಚುನಾವಣೆ ಮೊದಲ ಹಂತದ ಮತದಾನ ಇಂದು ಆರಂಭಗೊಂಡಿದೆ. ಕೊರೊನಾ ಆತಂಕದ ಮಧ್ಯೆ ಜನ ಮತದಾನ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಮತಕಟ್ಟೆಗಳಲ್ಲಿ ಕೊರೊನಾ ಜಾಗೃತಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ 7 ಗಂಟೆಯಿಂದಲೇ ಚುನಾವಣೆ ಆರಂಭಗೊಂಡಿದೆ. ರಾಜ್ಯದ 113 ತಾಲೂಕಿನ ಗ್ರಾಮಗಳಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. 30 ಜಿಲ್ಲೆಗಳ 113 ತಾಲೂಕುಗಳ 3019 ಗ್ರಾಮ ಪಂಚಾಯ್ತಿಗಳಿಗೆ ಮತದಾನ ನಡೆಯಲಿದೆ. ಒಟ್ಟು ಸ್ಥಾನಗಳು 48,048 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿರುವುದರಿಂದ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ. ಇನ್ನು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಮತಯಂತ್ರ(ಇವಿಎಂ) ಬಳಕೆ ಮಾಡಲಾಗುತ್ತಿದ್ದು, ಉಳಿದೆಡೆ ಮತಪತ್ರಗಳ ಮೂಲಕವೇ ಚುನಾವಣೆ ನಡೆಯಲಿವೆ. ಒಟ್ಟು 1,64,550 ನಾಮಪತ್ರ ಸಲ್ಲಿಕೆ ಆಗಿದೆ. 40,352 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. 432 ಸ್ಥಾನಗಳು ನಾಮಪತ್ರ ಸಲ್ಲಿಕೆ ಮಾಡದೆ ಖಾಲಿ ಉಳಿದಿವೆ. ಅಂತಿಮವಾಗಿ 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತದಾನದ ವೇಳೆ ಕೋವಿಡ್ ಹರಡದಂತೆ ಮುನ್ನೆಚ್ಚಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರು ಮತದಾನ ಮಾಡಲು ಕೊನೆಯ 1 ಗಂಟೆ ಅವಕಾಶ ನೀಡಲಾಗುವುದು. ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, 5847 ಚುನಾವಣಾ ಅಧಿಕಾರಿ ಹಾಗೂ 6,085 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಿದೆ. 45,128 ಮತಗಟ್ಟೆಗಳಿಗೆ ಸುಮಾರು 2,70,268 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಈ ಬಾರಿ 45 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights