ಯುಪಿಯ ಇಫ್ಕೊ-ಫುಲ್ಪುರ್ ಸ್ಥಾವರದಲ್ಲಿ ಅನಿಲ ಸೋರಿಕೆ : ಇಬ್ಬರು ಸಾವು – 15 ಮಂದಿ ಅಸ್ವಸ್ಥ!

ಯುಪಿಯ ಇಫ್ಕೊ-ಫುಲ್ಪುರ್ ಸ್ಥಾವರದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದು 15 ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಮಂಗಳವಾರ ತಡರಾತ್ರಿ ನಡೆದ ಅಮೋನಿಯಾ ಅನಿಲ ಸೋರಿಕೆ ಘಟನೆಯಿಂದಾಗಿ ಫುಲ್‌ಪುರದ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೊ) ಸ್ಥಾವರದಲ್ಲಿ ಒಂದು ಡಜನ್ ಉದ್ಯೋಗಿಗಳು ಅನಾರೋಗ್ಯಕ್ಕೆ ಒಳಗಾಗಿದ್ದು ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಅನಾರೋಗ್ಯಕ್ಕೆ ಒಳಗಾದ ನೌಕರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಪ್ರಯಾಗರಾಜ್ ಡಿಎಂ ಉಲ್ಲೇಖಿಸಿ ವರದಿ ಮಾಡಿದೆ. ಅನಿಲ ಸೋರಿಕೆ ಈಗ ನಿಂತುಹೋಗಿದ್ದು ಸೋರಿಕೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ಪ್ರಾರಂಭಿಸಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights