ಡಿಡಿಸಿ ಫಲಿತಾಂಶದ ನಂತರ BJP ಮತ್ತು JKAP ಕುದುರೆ ವ್ಯಾಪಾರ ಮಾಡುತ್ತಿವೆ: ಒಮರ್‌ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ)ಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ ಕುದುರೆ ವ್ಯಾಪಾರ ನಡೆಸುತ್ತಿದೆ. ಜಮ್ಮು ಕಾಶ್ಮೀರ ಪೊಲೀಸರು ಮತ್ತು ಆಡಳಿತವು ಪಕ್ಷಾಂತರ ಮತ್ತು ಕುದುರೆ ವ್ಯಾಪರಕ್ಕೆ ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಮಾಜಿ ಸಿಎಂ, ನ್ಯಾಚನಲ್‌ ಕಾನ್ಫರೆನ್ಸ್‌ (ಎನ್‌ಸಿ) ಪಕ್ಷದ ನಾಯಕ ಒಮರ್‌ ಅಬ್ದುಲ್ಲಾ ಆರೋಪಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹಿಬ್-ಐ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ)ಸದಸ್ಯ ಯಸ್ಮೀನಾ ಜಾನ್ ಅವರು ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಆ ಪಕ್ಷದ ನಾಯಕ ಮತ್ತು ಹಣಕಾಸು ಸಚಿವ ಅಲ್ತಾಫ್ ಬುಖಾರಿ ಘೋಷಿಸಿದ್ದಾರೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.

ಯಸ್ಮೀನಾ ಜಾನ್‌ ಜೆಕೆಎಪಿಗೆ ಸೇರಿದ್ದಾರೆ ಎಂದು ಘೋಷಣೆಯಾದ ನಂತರ ಒಮರ್‌ ಅಬ್ದುಲ್ಲಾ ಕುದುರೆ ವ್ಯಾಪಾರದ ಬಗ್ಗೆ ಮಾತನಾಡಿದ್ದು, ಕೆಲವು ಪಕ್ಷಗಳು ಹಣ ಬಲ ಮತ್ತು ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರ: ವಿಶೇಷ ಸ್ಥಾನಮಾನವನ್ನು ಮರಳಿ ತರಲು ಪ್ರಾದೇಶಿಕ ಪಕ್ಷಗಳ ಮೈತ್ರಿ!

ಯಾಸ್ಮಿನಾ ಜಾನ್ ಅವರು ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಪಕ್ಷದಿಂದ ಟಿಕೆಟ್‌ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ಗೆಲುವು ಸಾಧಿಸಿದ ನಂತರ ಜೆಕೆಎಪಿಗೆ ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್‌ಸಿ ಪಕ್ಷದ ನಾಯಕರನ್ನು ಪೊಲೀಸರು ಬಂಧನಕ್ಕೆ ಒಳಪಡಿಸುತ್ತಿದ್ದಾರೆ. ಇದು ಅವರ ಉದ್ದೇಶವೇನು ಎಂಬುದನ್ನು ವಿವರಿಸುತ್ತದೆ. ಆಡಳಿತ ಜೊತೆ ಸೇರಿ ಪೊಲೀಸರು ಕುದುರೆ ವ್ಯಾಪಾರ ಮತ್ತು ಪಕ್ಷಾಂತರಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಎನ್‌ಸಿಯಿಂದ ಟಿಕೆಟ್‌ ಪಡೆದು ಚುನಾವಣೆಯಲ್ಲಿ ಗೆದ್ದವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಆಡಳಿತವು ಪಕ್ಷಪಾತದ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಜಮ್ಮು-ಕಾಶ್ಮೀರ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಗುಪ್ಕರ್ ಮೈತ್ರಿಕೂಟ; BJPಗೆ ಮುಖಭಂಗ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights