ರೈತರ ಹೋರಾಟ ವಿಚಾರದಲ್ಲಿ ಬಿಜೆಪಿ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾಂಗ್ರೆಸ್‌ ಕಾರಣ: ಶಿವಸೇನೆ

ರಾಷ್ಟ್ರಮಟ್ಟದ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ದುರ್ಬಲವಾಗಿದೆ. ರಾಷ್ಟ್ರಮಟ್ಟದಲ್ಲಿ ಪ್ರಭಲವಾದ ಪ್ರತಿಪಕ್ಷವಿಲ್ಲ.  ಹೀಗಾಗಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ತೋರುತ್ತಿದೆ ಎಂದು ಶಿವಸೇನೆ ಹೇಳಿದೆ.

ರಾಷ್ಟ್ರ ಮಟ್ಟದ ಪಕ್ಷವಾಗಿರುವ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಪರಿಣಾಮಕಾರಿಯಾದ ವಿರೋಧ ಪಕ್ಷವಿಲ್ಲ. ಹೀಗಾಗಿ ಸರ್ಕಾರ ರೈತರ ದನಿಯನ್ನು ಕಡೆಗಣಿಸುತ್ತಿದೆ. ಅದಕ್ಕಾಗಿ ಪ್ರಬಲವಾದ ಪರ್ಯಾಯವನ್ನು ಕಟ್ಟಬೇಕಿದೆ. ಬಿಜೆಪಿಯನ್ನು ವಿರೋಧಿಸುವ ಶಿವಸೇನೆ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಯುಪಿಎ ಅಡಿಯಲ್ಲಿ ಒಂದಾಗಬೇಕು ಎಂದು ಶಿವಸೇನೆ ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ಹೇಳಿದೆ.

‘ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಆಡಳಿತದಲ್ಲಿರುವವರು ಈ ಪ್ರತಿಭಟನೆಯ ಬಗ್ಗೆ ಸಂಪೂರ್ಣವಾಗಿ ಅಸಡ್ಡೆ ತೋರಿದ್ದಾರೆ. ಸರ್ಕಾರದ ಈ ಉದಾಸೀನಕ್ಕೆ ದುರ್ಬಲವಾಗಿರುವ ಪ್ರತಿಪಕ್ಷವೂ ಕಾರಣ. ಕೇಂದ್ರ ಸರ್ಕಾರವನ್ನು ದೂರುವ ಬದಲು ಪ್ರಮುಖ ಪ್ರತಿಪಕ್ಷವು ತನ್ನ ನಾಯಕತ್ವ ಸಮಸ್ಯೆ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು’ ಎಂದು ಸಾಮ್ನಾದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗೆ ರೈತರು ಅವಕಾಶ ಕೊಡಬೇಕು: ಮೋದಿ ಪರ ಪುಂಗಿ ಊದಿದ ಹೆಚ್‌ಡಿಕೆ!

‘ರಾಹುಲ್ ಗಾಂಧಿ ಅವರು ವೈಯಕ್ತಿಕವಾಗಿ ಉತ್ತಮ ಹೋರಾಟ ಮಾಡುತ್ತಿದ್ದಾರೆ. ಯುಪಿಎ ಮೈತ್ರಿಕೂಟದ ಸ್ಥಿತಿ ಸರ್ಕಾರೇತರ ಸ್ವಯಂಸೇವಾ ಸಂಸ್ಥೆ (ಎನ್‌ಜಿಒ)ದಂತಾಗಿದೆ. ಇತರ ಪಕ್ಷಗಳೂ ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅವರಿಗೆ ಏನು ಮಾಡಬೇಕು ಎಂಬುದರಲ್ಲಿ ಸ್ಪಷ್ಟತೆ ಇಲ್ಲ ಎಂದು ಕಾಣುತ್ತದೆ’ ಎಂದು ಹೇಳಿದೆ.

‘ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ರಾಷ್ಟ್ರಮಟ್ಟದಲ್ಲಿ ವರ್ಚಸ್ಸು ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ರಾಷ್ಟ್ರಮಟ್ಟದ ಪ್ರತಿಪಕ್ಷವು ಅವರ ಜತೆ ನಿಲ್ಲಬೇಕಿದೆ’ ಎಂದು ಸೇನಾ ಹೇಳಿದೆ.


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ BJPಗೇ ಆಪರೇಷನ್‌; ಎನ್‌ಸಿಪಿ ಸೇರಲಿದೆ ಬಿಜೆಪಿಗರ ದಂಡು: ಅಜಿತ್ ಪವಾರ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights