ಕರ್ನಾಟಕದಲ್ಲಿ ಬ್ರಿಟನ್‌ ಕೊರೊನಾ ಭೀತಿ: ಆದರೂ ಜ. 1ರಿಂದ ಕಾಲೇಜುಗಳು ಕಡ್ಡಾಯವಾಗಿ ಓಪನ್‌!

ಬ್ರಿಟನ್ ಕೊರೊನಾ ಸೋಂಕಿನ ಭೀತಿ ಮತ್ತೆ ಮುನ್ನೆಲೆಗೆ ಬಂದಿದೆ. ಬ್ರಿಟನ್‌ನಿಂದ ಕರ್ನಾಟಕಕ್ಕೆ ಬಂದ 08 ಜನರಲ್ಲಿ ಬ್ರಿಟನ್‌ನಲ್ಲಿ ಕಾಣಿಸಿಕೊಂಡ ರೂಪಾಂತರಿ ಕೊರೊನಾ ವೈರಸ್‌ ಪತ್ತೆಯಾಗಿದ್ದು ಮತ್ತಷ್ಟು ಆತಂಕವನ್ನು ಸೃಷ್ಟಿಸಿದೆ. ಇದರ ನಡುವೆಯೂ ಕಳೆದ ವಾರವೇ ನಿಗಧಿ ಮಾಡಿದಂತೆ ಜನವರಿ 1ರಿಂದ ದ್ವಿತೀಯ ಪಿಯುಸಿಗೆ ಕಾಲೇಜುಗಳನ್ನು ಆರಂಭ ಪಕ್ಕಾ ಆಗಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಗೈಡ್‍ಲೈನ್ಸ್(ಎಸ್‍ಒಪಿ) ಬಿಡುಗಡೆ ಮಾಡಿದೆ.

ದ್ವಿತೀಯ ಪಿಯುಸಿ ಕಾಲೇಜು ಆರಂಭದಲ್ಲಿ ಯಾವುದೇ ಗೊಂದಲ ಇಲ್ಲ ಎಂದಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳು, ಉಪನ್ಯಾಕಸರು ಹಾಗೂ ಕಾಲೇಜಿನ ಸಿಬ್ಬಂದಿಗೆ ಕೊರೊನಾ ಮುನ್ನೆಚ್ಚರಿಕೆಯ ಗೈಡ್‍ಲೈನ್ಸ್ ಬಿಡುಗಡೆ ಮಾಡಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ 10 ತಿಂಗಳ ನಂತರ ಪಿಯುಸಿ ವಿದ್ಯಾರ್ಥಿಗಳಿಗೆ ಕ್ಲಾಸ್‍ಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ದಿನಪೂರ್ತಿ ತರಗತಿಗಳು ಇರುವುದಿಲ್ಲ. ಪ್ರತಿದಿನ ಕೇವಲ 45 ನಿಮಿಷಗಳ, 4 ತರಗತಿಗಳನ್ನು ಮಾತ್ರ ನಡೆಸಬೇಕು ಎಂದು ಗೈಡ್‍ಲೈನ್ಸ್‍ನಲ್ಲಿ ಸೂಚನೆ ನೀಡಲಾಗಿದೆ.

ಒಂದು ಕೊಠಡಿಯಲ್ಲಿ ಕೇವಲ 15 ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ ನೀಡಬೇಕು. ಕಾಲೇಜುಗಳಲ್ಲಿ ಸಾಮೂಹಿಕ ಪ್ರಾರ್ಥನೆ ಹಗೂ ಕ್ರೀಡಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳಿಲ್ಲ ಎಂಬ ಪ್ರಮಾಣ ಪತ್ರವನ್ನು ಪೋಷಕರಿಂದ ದೃಢೀಕರಣ ಪತ್ರ ತರುವುದನ್ನು ಕಡ್ಡಾಯ ಮಾಡಲಾಗಿದೆ.

ಕೋವಿಡ್ ಹಿನ್ನೆಲೆ ಕಾಲೇಜು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಇರುವುದಿಲ್ಲ. 51 ವರ್ಷ ಮೇಲ್ಪಟ್ಟ ಸಿಬ್ಬಂದಿ ಮಾಸ್ಕ್ ಜೊತೆಗೆ ಫೇಸ್ ಶೀಲ್ಡ್ ಬಳಕೆ ಕಡ್ಡಾಯ ಎಂದು ಎಸ್‍ಒಪಿಯಲ್ಲಿ ಸ್ಪಷ್ಟಪಡಿಸಲಾಗಿದೆ.


Read Also: ಹೊಸ ವರ್ಷದ ಆಚರಣೆಗೆ ಬ್ರೇಕ್ : ಭಾನುವಾರದೊಳಗೆ ನಿರ್ಬಂಧಗಳ ಮಾರ್ಗಸೂಚಿ ಪ್ರಕಟ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights