ಭಾರತ V/S ಆಸ್ಟ್ರೇಲಿಯಾ: 2ನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಮೇಲುಗೈ; ರಹಾನೆ ಶತಕ

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್‌ ಮ್ಯಾಚ್‌ನಲ್ಲಿ ಟೀಮ್‌ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಅವರ ಅಜೇಯ ಶತಕದ ನೆರವಿನಿಂದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆದುಕೊಂಡಿದೆ.

ಎರಡನೇ ದಿನದ ಅಂತ್ಯಕ್ಕೆ ಟೀಮ್ ಇಂಡಿಯಾ ಐದು ವಿಕೆಟ್‌ಗಳ ನಷ್ಟಕ್ಕೆ 277 ರನ್ ಗಳಿಸಿದೆ. ರಹಾನೆ ಔಟ್‌ ಆಗದೇ 104 ರನ್ ಗಳಿಸಿದ್ರೆ, ರವೀಂದ್ರ ಜಡೇಜಾ ಕೂಡ ಔಟ್‌ ಆಗದೇ 40 ರನ್‌ಗಳಿಸಿದ್ದು, ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಸದ್ಯ ಟೀಮ್ ಇಂಡಿಯಾ 82 ರನ್ ಗಳ ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಮುನ್ನಡೆ ಸಾಧಿಸಿದ್ದು, ಪಂದ್ಯ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿದೆ. ಭಾನುವಾರ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 277 ರನ್ ಬಾರಿಸಿತ್ತು. ಮಯಾಂಕ್ ಅಗರ್ವಾಲ್ (0), ಶುಬ್ಮನ್ ಗಿಲ್ (45), ಚೇತೇಶ್ವರ್ ಪೂಜಾರ (17), ಹನುಮ ವಿಹಾರಿ (21), ರಿಷಭ್ ಪಂತ್ (29) ಮೊದಲ ಇನ್ನಿಂಗ್ಸ್‌ನಲ್ಲಿ ಔಟ್‌ ಆಗಿದ್ದಾರೆ.

ದ್ವಿತೀಯ ಟೆಸ್ಟ್‌ನಲ್ಲಿ  ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿರುವ ಅಜಿಂಕ್ಯ ರಹಾನೆ ಟೆಸ್ಟ್ ಕ್ರಿಕೆಟ್‌ ವೃತ್ತಿ ಜೀವನದಲ್ಲಿ 12ನೇ ಶತಕ ಬಾರಿಸಿದ್ದಾರೆ.

ಎರಡನೇ ಟೆಸ್ಟ್‌ನ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ, ಮ್ಯಾಥ್ಯೂ ವೇಡ್ 30, ಮಾರ್ನಸ್ ಲ್ಯಬುಶೇನ್ 48, ಟ್ರಾವಿಸ್ ಹೆಡ್ 38, ಕ್ಯಾಮರಾನ್ ಗ್ರೀನ್ 12, ಟಿಮ್ ಪೈನ್ 13, ಪ್ಯಾಟ್ ಕಮಿನ್ಸ್ 9, ಮಿಚೆಲ್ ಸ್ಟಾರ್ಕ್ 7, ನೇಥನ್ ಲಿಯಾನ್ 20, ಜೋಶ್ ಹ್ಯಾಝಲ್ವುಡ್ 4 ರನ್‌ನೊಂದಿಗೆ ಮೊದಲ ಇನ್ನಿಂಗ್ಸ್‌ನಲ್ಲಿ 195 ರನ್ ಬಾರಿಸಿತ್ತು.


ಇದನ್ನೂ ಓದಿ: ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ನಲ್ಲಿ ಬ್ರೇಕ್‌ಡ್ಯಾನ್ಸ್‌ಗೆ ಮಾನ್ಯತೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights