ಹೊಸ ಕೃಷಿ ಕಾನೂನು ವಿರೋಧಿಸಿ ಪಾಟ್ನಾದಲ್ಲಿ ಪ್ರೊಟೆಸ್ಟ್ : ಬಿಹಾರ ಪೊಲೀಸರಿಂದ ಲಾಠಿ ಚಾರ್ಜ್!

ಹೊಸ ಕೃಷಿ ಕಾನೂನು ವಿರೋಧಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ಪಾಟ್ನಾದಲ್ಲಿ ಪ್ರತಿಭಟನೆ ಕೈಗೊಂಡಿದ್ದು ರಾಜ್ ಭವನಕ್ಕೆ ಮೆರವಣಿಗೆ ವೇಳೆ ಬಿಹಾರ ಪೊಲೀಸ್ ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಜಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ಮಂಗಳವಾರ ವಿವಿಧ ರೈತ ಸಂಘಟನೆಗಳು ಮತ್ತು ಎಡಪಂಥೀಯ ಪರ ಸಂಘಟನೆಗಳ ಸಾವಿರಾರು ಪ್ರತಿಭಟನಾಕಾರರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಹಾರದ ಪಾಟ್ನಾದ ರಾಜ್ ಭವನಕ್ಕೆ ಮೆರವಣಿಗೆ ನಡೆಸಿದ್ದರು.

ಡಕ್ ಬಂಗಲೆ ಕ್ರಾಸಿಂಗ್‌ನಲ್ಲಿ ಪೊಲೀಸರು ರೈತರನ್ನು ತಡೆಯೊಡ್ಡುವ ಮೊದಲು ಸಾವಿರಾರು ಪ್ರತಿಭಟನಾಕಾರರು ಫ್ರೇಜರ್ ರಸ್ತೆಯ ಮೂಲಕ ಮೆರವಣಿಗೆ ನಡೆಸುತ್ತಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ರೈತರು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು ಪಾಟ್ನಾದ ಹೃದಯಭಾಗದಲ್ಲಿ ರೈತರ ಮೇಲೆ ಲಾಠಿ ಚಾರ್ಜ್‌ ಮಾಡಲಾಗಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ರ್ಯಾಲಿಯ ಪ್ರಾರಂಭದ ಹಂತವಾದ ಗಾಂಧಿ ಮೈದಾನದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರು ಮತ್ತು ಆಡಳಿತಾಧಿಕಾರಿಗಳ ನಡುವೆ ನಡೆದ ಮಾತಿನ ಚಕಮಕಿ ನಡೆದಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights