ಕರ್ನಾಟಕಕ್ಕೂ AIMS ಆಸ್ಪತ್ರೆ ಭಾಗ್ಯ: ಇದರಲ್ಲೂ ಖಾಸಗಿ ಸಹಭಾಗಿತ್ವ ನೆಪದಲ್ಲಿ ಲೂಟಿಗೆ ಅವಕಾಶ ಕೊಡುತ್ತಿದೆ BSY ಸರ್ಕಾರ?

ರಾಜಧಾನಿ ದಿಲ್ಲಿಯ ಸುಸಜ್ಜಿತ AIMS ಮಾದರಿಯ ಬೃಹತ್ ಆಸ್ಪತ್ರೆ ರಾಜ್ಯದಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ.. ಪ್ರತಿ ರಾಜ್ಯದಲ್ಲೂ ಏಮ್ಸ್ ಸಂಸ್ಥೆ ನಿರ್ಮಿಸುವ ಗುರಿ ಕೇಂದ್ರ ಸರ್ಕಾರಕ್ಕಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಏಮ್ಸ್ ಕೂಡ ರಾಜ್ಯಕ್ಕೆ ಸಿಗಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ರಾಜ್ಯಕ್ಕೂ ಏಮ್ಸ್ ಸಂಸ್ಥೆಯನ್ನು ತರಬೇಕು ಎಂಬ ಉದ್ದೇಶ BSY ಸರ್ಕಾರಕ್ಕೆ ಇದೆ. ಏಮ್ಸ್ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆ ಜಾರಿಯಲಿದ್ದು, ಅದು ಶೀಘ್ರವೇ ಕೈಗೂಡಲಿದೆ ಎಂದು ಆರೋಗ್ಯ ಸಚಿವ ಸುಧಾಕರ ಆಶಾಭಾವ ವ್ಯಕ್ತಪಡಿಸಿದ್ದಾರೆ.

ಒಂದು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 600-700 ಕೋಟಿ ರೂ. ಬೇಕಾಗುತ್ತದೆ. ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಭ್ಯಾಸ, ಜನರಿಗೆ ಉಚಿತ ಆರೋಗ್ಯ ಸೌಲಭ್ಯ ನೀಡಬಹುದು. ಗುಜರಾತ್ ನಲ್ಲಿ ಈ ರೀತಿ ಪ್ರಯತ್ನ ನಡೆಯುತ್ತಿದ್ದು, ನಮ್ಮಲ್ಲೂ ಈ ಬಗೆಯ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು. ಆದರೆ ಖಾಸಗಿ ಸಹಭಾಗಿತ್ವದಲ್ಲಿ ಊಚಿತ ಸೌಲಭ್ಯ ದೊರೆಯಲಿದೆ ಅನ್ನುವ ಪ್ರಶ್ನೆಗೆ ಸಚಿವರ ಬಳಿ ಉತರವಿಲ್ಲ…

ಇದನ್ನೂ ಓದಿ: ಗ್ರಾಮ ಪಂ. ಚುನಾವಣಾ ಮತ ಎಣಿಕೆ ಆರಂಭ; ಯಾರಿಗೆ ಸಿಗಲಿದೆ ಸ್ಥಳೀಯ ಸಂಸ್ಥೆಗಳ ಗದ್ದುಗೆ!

ಯು.ಕೆ.ಯಿಂದ ಬಂದವರ ಪೈಕಿ 26 ಮಂದಿಯ ಮಾದರಿಗಳನ್ನು ನಿಮ್ಹಾನ್ಸ್ ಗೆ ಕಳುಹಿಸಿದ್ದು, ಮೂವರಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆಯಾಗಿದೆ. ಈ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸಂಪರ್ಕಿತರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಯುನೈಟೆಡ್ ಕಿಂಗ್ ಡಮ್ ನಿಂದ ದೇಶಕ್ಕೆ ಬಂದವರಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಕುರಿತು ಐಸಿಎಂಆರ್ ಮಾಹಿತಿ ಸಂಗ್ರಹಿಸುತ್ತಿದೆ. ಇದು ಏಕರೂಪದ ಮಾಹಿತಿ ಸಂಗ್ರಹವಾಗಿರುವುದರಿಂದ ಯಾವುದೇ ಗೊಂದಲ ಉಂಟಾಗುವುದಿಲ್ಲ. ಯು.ಕೆ.ಯಿಂದ ಬಂದವರಲ್ಲಿ ಹೆಚ್ಚಿನವರು ಸೋಂಕಿಗೆ ಒಳಗಾಗಿಲ್ಲದ ಕಾರಣ ಯಾವುದೇ ಆತಂಕ ಇಲ್ಲ. ಹಾಗೆ ಬಂದವರಲ್ಲಿ ಕೆಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಅಂತಹವರನ್ನು ಪತ್ತೆ ಮಾಡಲಾಗುತ್ತಿದೆ ಎಂದರು.


ಇದನ್ನೂ ಓದಿ: BJP ಮತ್ತು JDS ವಿಲೀನವಲ್ಲದ ಹೊಂದಾಣಿಕೆ BJPಗೆ ಹೆಚ್ಚು ಲಾಭ: ಡೀಟೇಲ್ಸ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights