ಗ್ರಾ.ಪ ಚುನಾವಣೆಯಲ್ಲಿ ನಾವೇ ನಂ.1 – ಸಿಎಂ ಬಿಎಸ್ವೈಗೆ ಟಗರು ಡಿಚ್ಚಿ…!

ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕೈಗೆ ಜಯ, ನಾವೇ ನಂಬರ್ ಒನ್ ಎಂದು ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗ್ರಾಮ ಪಮಚಾಯಿತಿ ಚುನಾವಣೆ ಯಾವುದೇ ಪಕ್ಷದ ಚಿಹ್ಹೆಯನ್ನು ನಡೆಯುತ್ತಿರುವ ಚುನಾವಣೆ ಅಲ್ಲ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಸೇರಿದಂತೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ನಿಂತುಕೊಂಡಿದ್ದಾರೆ. ಫಲಿತಾಂಶದ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಸಿಗಬೇಕಾದರೆ ಸ್ವಲ್ಪ ಸಮಯ ಬೇಕು. ಹೀಗಿದ್ದರೂ ನಮಗಿರುವ ಮಾಹಿತಿ ಪ್ರಕಾರ ನಮ್ಮ ಕಾರ್ಯಕರ್ತರೇ ಜಾಸ್ತಿ ಸಂಖ್ಯೆಯಲ್ಲಿ ಗೆದ್ದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಬಿಎಸ್‌ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ, ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಶೇ. 60 ರಷ್ಟು ಗ್ರಾ.ಪಂ.ಗಳಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿವಿಧ ಕ್ಷೇತ್ರಗಳ ಕಾರ್ಯಕರ್ತರು ಮತ್ತು ಶಾಸಕರ ಪರಿಶ್ರಮದಿಂದ ಬಿಜೆಪಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಈಗಾಗಲೇ 3,800 ಪಂಚಾಯಿತಿ ಗೆದ್ದಿದ್ದೇವೆ ಎಂದು ಹೇಳುವುದು ಹಾಸ್ಯಾಸ್ಪದ ಎಂದು ಸಿದ್ದರಾಮಯ್ಯ ಟೀಕಿಸಿದರು.

ಇದಕ್ಕೆ ಟಾಂಗ್ ಕೊಟ್ಟ ಟಗರು ಬಿಜೆಪಿಗೆ ಅನೇಕ ಕಡೆಗಳಲ್ಲಿ ಅಭ್ಯರ್ಥಿಗಳೇ ಇರಲಿಲ್ಲ. ನಮ್ಮ ಕಾರ್ಯಕರ್ತರನ್ನು ಕರೆದು ಟಿಕೆಟ್ ಕೊಟ್ಟಿದ್ದಾರೆ.ಪುರಸಭೆ ನಗರಸಭೆಯಲ್ಲೂ ನಾವೇ ನಂಬರ್ ಒನ್ ಆಗಿದ್ದೆವು. ಈಗನೂ ನಾವೇ ನಂಬರ್ ಒನ್ ಎಂದ ಅವರು ಗೆದ್ದಿರುವ ಎಲ್ಲಾ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಬಲಪಡಿಸುವಂತಹ ಕೆಲಸ ಮಾಡಬೇಕು ಎಂದು ಸಲಹೆ ಕೊಡಲು ಬಯಸುತ್ತೇನೆ. ಚುನಾವಣಾ ವ್ಯವಸ್ಥೆಗೆ ಗ್ರಾಮ ಪಂಚಾಯಿತಿ ತಳಹದಿ. ಶೇಕಡಾವಾರು ಎಷ್ಟು ಗೆದ್ದಿದ್ದೇವೆ ಎಂದು ನಾನು ಹೇಳಲ್ಲ. ಆದರೆ ನಮ್ಮ ಕಾರ್ಯಕರ್ತರೇ ಮೊದಲ ಸ್ಥಾನದಲ್ಲಿ ಇದ್ದಾರೆ. ಬಿಎಸ್‌ವೈ ಹಗಲು ಕನಸಿನಲ್ಲಿ ಇದ್ದಾರೆ. ನಾಳೆ ವಿಧಾನಸಭೆ ಚುನಾವಣೆ ನಡೆದರೂ ಕಾಂಗ್ರೆಸ್ ಗೆಲ್ಲುತ್ತದೆ. ಬಿಎಸ್ವೈ ಅವರ ಕುರ್ಚಿ ಅಲ್ಲಾಡುತ್ತಿದೆ ಎಂದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights