ಹಾಸನ 3 ಮತ್ತು ಗದಗದಲ್ಲಿ 10 ಜನ ಶಿಕ್ಷಕರಿಗೆ ಕೊರೊನಾ : ಶಾಲೆಗಳು ಬಂದ್..!
ಜನವರಿ 1ರಿಂದ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು ಎಲ್ಲಾ ಶಿಕ್ಷಕರಿಗೂ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಈ ವೇಳೆ ರಾಜ್ಯದಲ್ಲಿ ಹಾಸನದಲ್ಲಿ ಮೂರು ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ, ಗದಗ ಜಿಲ್ಲೆಯಲ್ಲಿ 10 ಜನ ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಹೌದು.. ಹಾಸದಲ್ಲಿ ಶಾಲಾ ಕಾಲೇಜುಗಳ ಆರಂಭಕ್ಕೂ ಎರಡು ಮೂರು ದಿನ ಮುಂಚಿತವಾಗಿ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ ಮೂರು ಜನ ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ಬಹಿರಂಗಗೊಂಡಿದೆ. ಆದರೆ ಈ ಮೂರು ಶಿಕ್ಷಕರು ಶಾಲೆಗೆ ಹೋಗದೇ ಇರುವುದು ಒಂದು ಚೂರು ನೆಮ್ಮದಿ ತಂದಿದ್ದು, ಮಕ್ಕಳು ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಹೀಗಾಗಿ ಶಾಲೆಗಳನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆ.
ಇನ್ನೂ ಗದಗ ಜಿಲ್ಲೆಯಲ್ಲಿ ಶಾಲೆ ಆರಂಭವಾಗುತ್ತಿದ್ದಂತೆಯೇ 10 ಜನ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ 5 ಶಾಲೆಗಳನ್ನು ಬಂದ್ ಮಾಡಲಾಗಿದೆ. ಕೋವಿಡ್-19 ಹಿನ್ನೆಲೆ ಕಳೆದ 10 ತಿಂಗಳಿನಿಂದ ಮುಚ್ಚಲಾಗಿದ್ದ ಶಾಲಾ ಕಾಲೇಜುಗಳನ್ನು ಸರ್ಕಾರ ಹೊಸ ವರ್ಷದ ಾರಂಭದಲ್ಲಿ ಪುನಾರಂಭಿಸಲು ನಿರ್ಧರಿಸಿ ಇದೀಗ 10ನೇ ತರಗತಿ ಹಾಗೂ ಪಿಯಿಸಿ ತರಗತಿಯನ್ನು ತೆರೆಯಲಾಗಿದೆ.
ಗದಗ ಜಿಲ್ಲೆಯಾದ್ಯಂತ 10 ಜನ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಐದು ಶಾಲೆಯ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಶಿಕ್ಷಣ ನೀಡಲಾಗುತ್ತಿಲ್ಲ. ಗದಗ ನಗರದ ಮೂರು ಹಾಗೂ ಜಿಲ್ಲೆಯ ಎರಡು ಶಾಲೆಯನ್ನು ಬಂದ್ ಮಾಡಲಾಗಿದೆ.
ಶಿಕ್ಷಕರಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆ 2 ಬಾರಿ ಶಾಲೆಯನ್ನು ಸ್ವಚ್ಚಗೊಳಿಸಲಾಗಿದೆ. ಆದರೂ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ಒಟ್ಟು 6,665 ಶಿಕ್ಷಕರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 10 ಜನರಿಗೆ ಪಾಸಿಟಿವ್ ಬಂದಿದೆ. ವೈದ್ಯರು ಸಲಹೆ ಮೇರೆಗೆ ಶಿಕ್ಷಕರು ಈಗ ಹೋಂ ಕ್ವಾರಂಟೈನ್ ನಲ್ಲಿದ್ದಾಋಎ ಎಂದು ಗದಗದ ಡಿಡಿಪಿಐ ಬಸವಲಿಂಗಪ್ಪ ಹೇಳಿಕೆ ನೀಡಿದ್ದಾರೆ.

