ಕೇಂದ್ರದ ಮಾಜಿ ಸಚಿವ ಬುಟಾ ಸಿಂಗ್ ನಿಧನ : ಗಣ್ಯರಿಂದ ಸಂತಾಪ..!

ಹಿರಿಯ ಕಾಂಗ್ರೆಸ್ ಮುಖಂಡ ಕೇಂದ್ರದ ಮಾಜಿ ಸಚಿವ ಬುಟಾ ಸಿಂಗ್ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಲ್ಲಿ ಅವರು ಕಳೆದ ಅಕ್ಟೋಬರ್‌ನಿಂದ ಕೋಮಾದಲ್ಲಿದ್ದರು. ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದರು. ಬೆಳಿಗ್ಗೆ 5.30 ರ ಸುಮಾರಿಗೆ ಸಿಂಗ್ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ.

ಬುಟಾ ಸಿಂಗ್ ಅವರ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, “ಶ್ರೀ ಬೂಟಾ ಸಿಂಗ್ ಜಿ ಅವರು ಅನುಭವಿ ಆಡಳಿತಗಾರರಾಗಿದ್ದರು. ಬಡವರ ಮತ್ತು ದೀನ ದಲಿತರ ಕಲ್ಯಾಣಕ್ಕಾಗಿ ಪರಿಣಾಮಕಾರಿ ಧ್ವನಿಯಾಗಿದ್ದರು. ಅವರು ನಿಧನರಾದಾಗ ಬೇಸರವಾಯಿತು. ಅವರ ಅಗಲಿಕೆಗೆ ನನ್ನ ಸಂತಾಪ” ಸೂಚಿಸಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಸಂತಾಪ ಸೂಚಿಸಿ, “ಬುಟಾ ಸಿಂಗ್ ಜಿ ಅವರ ನಿಧನದೊಂದಿಗೆ ದೇಶ ನಿಷ್ಠಾವಂತ ನಾಯಕ ಮತ್ತು ಸಾರ್ವಜನಿಕ ಸೇವಕನನ್ನು ಕಳೆದುಕೊಂಡಿದೆ. ಅವರು ತಮ್ಮ ಇಡೀ ಜೀವನವನ್ನು ದೇಶದ ಸೇವೆಗಾಗಿ ಮತ್ತು ಜನರ ಯೋಗಕ್ಷೇಮಕ್ಕಾಗಿ ಮುಡಿಪಾಗಿಟ್ಟರು. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪ” ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights