ಡೆತ್ ನೋಟ್ ಬರೆದಿಟ್ಟು ಯುಪಿಯಲ್ಲಿ 30ರ ಮಹಿಳಾ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆ..!

30 ವರ್ಷದ ಮಹಿಳಾ ಸಬ್ ಇನ್ಸ್ಪೆಕ್ಟರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಬುಲಂದ್ ಶಗರ್ ನಲ್ಲಿ ನಡೆದಿದೆ.

2015ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಯಾಗಿದ್ದ ಆರ್ಜೂ ಪವಾರ್ ಆರ್ಜೂ ಶಾಮಿಲಿ ಜಿಲ್ಲೆಯವರಾಗಿದ್ದಾರೆ. ಅನೂಪ್ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪೊಲೀಸರು ಮನೆ ಬಾಗಿಲು ಒಡೆದು ಶವವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್ಜೂ ಅವರ ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದೆ. ಪತ್ರದಲ್ಲಿ ಏನಿದೆ ಎಂಬುವದನ್ನ ಪೊಲೀಸರು ಬಹಿರಂಗಪಡಿಸಬೇಕಾಗಿದೆ.

ಮನೆ ಮಾಲೀಕರು ಇಂದು ಬೆಳಿಗ್ಗೆ ಆರ್ಜೂ ಅವರ ಶವ ಫ್ಯಾನ್ ನಲ್ಲಿ ನೇತಾಡುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೋಡಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಪೊಲೀಸರು ಆರ್ಜೂ ಅವರ ಸ್ನೇಹಿತರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಆರ್ಜೂ ಪೋಷಕರಿಗೂ ಮಾಹಿತಿ ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights