ಲಕ್ನೋ ಸ್ಮಶಾನದಲ್ಲಿ 25 ಜನ ಸಾವು ಪ್ರಕರಣ : ಮೂವರು ಅರೆಸ್ಟ್ …!

ಗಾಜಿಯಾಬಾದ್ ಜಿಲ್ಲೆಯ ಮುರಾದ್‌ನಗರದ ಸ್ಮಶಾನದಲ್ಲಿ ಶವ ಸಂಸ್ಕಾರಕ್ಕಾಗಿ ಹೋದ ಜನರ ಪೈಕಿ 25 ಜನ ಗೋಡೆ ಕುಸಿದು ಧಾರುಣವಾಗಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ ಗಾಜಿಯಾಬಾದ್ ಪೊಲೀಸರು ಎಂಜಿನಿಯರ್ ಮತ್ತು ಮೇಲ್ವಿಚಾರಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ನಿಹರಿಕಾ ಸಿಂಗ್, ಜೂನಿಯರ್ ಎಂಜಿನಿಯರ್ ಚಂದ್ರ ಪಾಲ್ ಮತ್ತು ಮೇಲ್ವಿಚಾರಕ ಆಶಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಗುತ್ತಿಗೆದಾರ ಅಜಯ್ ತ್ಯಾಗಿ ಪರಾರಿಯಾಗಿದ್ದಾನೆ.

ಮುರಾದ್‌ನಗರ ಪೊಲೀಸ್ ಠಾಣೆಯಲ್ಲಿ ಮೃತರ ಸಂಬಂಧಿಕರ ದೂರಿನ ಮೇರೆಗೆ ಅಜಯ್ ತ್ಯಾಗಿ, ನಿಹರಿಕಾ ಸಿಂಗ್, ಚಂದ್ರ ಪಾಲ್ ಮತ್ತು ಆಶಿಸ್ ವಿರುದ್ಧ ಐಪಿಸಿ ಸೆಕ್ಷನ್ 304 ಅಡಿಯಲ್ಲಿ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗಿದೆ) ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಾಣಹಾನಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಮೀರತ್‌ನ ವಿಭಾಗೀಯ ಆಯುಕ್ತರು ಮತ್ತು ಪೊಲೀಸ್ ವಲಯದ ಹೆಚ್ಚುವರಿ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights