ಕಾಂಗ್ರೆಸ್‌ಗೆ ಬಿಗ್‌ ಶಾಕ್‌: ಕೈ ಪಕ್ಷದ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ರಾಜೀನಾಮೆ!

ಕಾಂಗ್ರೆಸ್‌ನ ದೆಹಲಿ ನಾಯಕರು ರಾಜ್ಯ ಕಾಂಗ್ರೆಸ್‌ ಮೇಲೆ ನಿರಂತರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಪಕ್ಷವನ್ನು ಸ್ವಂತಂತ್ರವಾಗಿ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್, ಸೋಮವಾರ ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿರುವ ಥೋರಟ್‌ ಅವರು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರೂ ಆಗಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರದಲ್ಲಿ ಕಂದಾಯ ಸಚಿವರೂ ಆಗಿದ್ದಾರೆ.

ಮಹಾರಾಷ್ಟ್ರ ಘಟಕವನ್ನು ಬಲವಾದ ರಾಜಕೀಯ ಶಕ್ತಿಯಾಗಿ ಅಭಿವೃದ್ಧಿಪಡಿಸಲು ಅದನ್ನು ಪುನರ್ರಚಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಥೋರಟ್ ಅವರನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುವಂತೆ ಹಲವು ಕರೆಗಳು ಬಂದಿವೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಬಿಜೆಪಿಗೆ ಬಂದರೆ ಅಧ್ಯಕ್ಷ ಸ್ಥಾನ ಕೊಡಿಸುತ್ತೇವೆ; ಗ್ರಾಮ ಪಂ. ಸದಸ್ಯನಿಗೆ BJP ಜಿಲ್ಲಾಧ್ಯಕ್ಷ ಆಮಿಷವೊಡ್ಡಿದ ಆಡಿಯೋ ವೈರಲ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights