ಸಿಎಂ ಬಿಎಸ್ವೈ ವಿರುದ್ಧ ಡಿನೋಫಿಕೇಷನ್ ಪ್ರಕರಣ: ತನಿಖೆಗೆ ಹೈಕೋರ್ಟ್ ಆದೇಶ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿನೋಟಿಫಿಕೇಷನ್ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿದ್ದ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ದಾಖಲಿಸಿದ್ದ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ.
ಆರ್.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪಸಿ ದೂರು ಸಲ್ಲಿಸಲಾಗಿತ್ತು. ಲೋಕಾಯುಕ್ತ ಪೊಲೀಸರು ಹಾಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎರಡನೇ ಆರೋಪಿಯಾಗಿದ್ದಾರೆ.
ತಮ್ಮ ವಿರುದ್ಧದ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯನ್ನು ಹೈಕೋರ್ಟ್ ನ್ಯಾಯಾಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಾಪೀಠ ಡಿಸೆಂಬರ್ ಕೊನೆಯ ವಾರದಲ್ಲಿ ತಿರಸ್ಕರಿಸಿತ್ತು. ಇಂದು ಮುಂದುವರೆದ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೆ.
ಇದಲ್ಲದೆ, ಡಿನೋಟಿಫಿಕೇಷನ್ ನ ಮತ್ತೊಂದು ಪ್ರಕರಣದಲ್ಲೂ ಸಿಎಂ ಬಿಎಸ್ವೈ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಪ್ರಕರಣದಲ್ಲಿ ಅಲಮ್ ಪಾಷಾ ಸಲ್ಲಿಸಿದ್ದ ಅರ್ಜಿ ಅಂಗೀಕರಿಸಿದ ಹೈಕೋರ್ಟ್, ಖಾಸಗಿ ದೂರು ಮುಂದುವರಿಸಲು ಆದೇಶಿಸಿದೆ. 2014 ರಲ್ಲಿ ಮುರುಗೇಶ್ ನಿರಾಣಿ ವಿರುದ್ದ ಅಲಮ್ ಪಾಷಾ ಖಾಸಗಿ ದೂರು ದಾಖಲಿಸಿದ್ದರು.
ಅಲ್ಲದೆ, ಬೆಂಗಳೂರಿನ ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿ ಜಾಗಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ವಿರುದ್ಧ ನೋಟಿಫಿಕೇಷನ್ ಆರೋಪಿಸಿ ದೂರ ಸಲ್ಲಿಸಲಾಗಿದೆ.
ಇದನ್ನೂ ಓದಿ: ಬಿಎಸ್ವೈ ವಿರುದ್ದ ಮತ್ತೆ ಯತ್ನಾಳ್ ವಾಗ್ದಾಳಿ: BJPಗೆ ತಲೆನೋವಾದ ಕೇಸರಿ ಶಾಸಕ!

