ಸೆಂಟ್ರಲ್ ವಿಸ್ಟಾ ಯೋಜನೆ ಮುಂದುವರಿಕೆಗೆ ಸುಪ್ರೀಂ ಒಪ್ಪಿಗೆ; ಏನಿದು ಯೋಜನೆ?

ಪರಿಸರ ಸಚಿವಾಲಯದ ಅನುಮತಿಯ ಶಿಫಾರಸುಗಳು ಮಾನ್ಯವಾಗಿದ್ದು, ನಾವು ಅದನ್ನು ಎತ್ತಿಹಿಡಿಯುತ್ತೇವೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಸೆಂಟ್ರಲ್ ವಿಸ್ಟಾ ಯೋಜನೆಯನ್ನು ಮುಂದುವರೆಸಲು ಅನುಮತಿ ನೀಡಿದೆ.

ಸೆಂಟ್ರಲ್ ವಿಸ್ಟಾ ಪ್ರದೇಶದ ಮರು ಅಭಿವೃದ್ಧಿಗೆ ಕೇಂದ್ರ ಸರ್ಕಾರ ರೂಪಿಸಿರುವ ಯೋಜನೆಯ ಮೌಲ್ಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್‌, ನಿರ್ಮಾಣ ಕಾಮಗಾರಿ ಆರಂಭಿಸಲು ಪರಂಪರಾ ಸಂರಕ್ಷಣಾ ಸಮಿತಿಯ ಅನುಮೋದನೆ ಅಗತ್ಯವಾಗಿದ್ದು, ಯೋಜನೆಯ ಪ್ರತಿಪಾದಿಕರು ಸಮಿತಿಯಿಂದ ಅನುಮೋದನೆ ಪಡೆಯಬೇಕು ಎಂದು ಹೇಳಿದೆ.

ಕೇಂದ್ರ ದೆಹಲಿಯ ಲುಟೆಯನ್ಸ್ ವಲಯದಲ್ಲಿ ಹೊಸ ಸಂಸತ್ ಹಾಗೂ ಇತರ ಕೇಂದ್ರ ಸರ್ಕಾರಿ ಕಚೇರಿಗಳನ್ನು ನಿರ್ಮಿಸುವ ಉದ್ದೇಶದಿಂದ ಸಿದ್ದಪಡಿಸಲಾಗುತ್ತಿರುವ 20 ಸಾವಿರ ಕೋಟಿ ರೂಪಾಯಿ ವೆಚ್ಚದ ಸೆಂಟ್ರಲ್ ವಿಸ್ಟಾ ಯೋಜನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ದೆಹಲಿ ಅಭಿವೃದ್ದಿ ಪ್ರಾಧಿಕಾರದ ಶಿಫಾರಸ್ಸಿನಂತೆ ಸೆಂಟ್ರಲ್ ವಿಸ್ತಾ ಅಭಿವೃದ್ದಿ ಯೋಜನೆಗೆ ಅಗತ್ಯವಾಗಿರುವ ಭೂಮಿ ಬದಲಾವಣೆಗೆ
ಕೇಂದ್ರ ಸರ್ಕಾರ ಈ ಮೊದಲು ಅನುಮೋದನೆ ನೀಡಿತ್ತು. ಅಲ್ಲದೆ, ಹೊಸ ಪಾರ್ಲಿಮೆಂಟ್ ಭವನ ನಿರ್ಮಾಣದ ಯೋಜನೆಗೂ ಕೂಡ ಒಪ್ಪಿಗೆ ಸೂಚಿಸಿತ್ತು. ಪ್ರಸ್ತುತ ಇರುವ ಪಾರ್ಲಿಮೆಂಟ್ ಭವನ, ರಾಷ್ಟ್ರಪತಿ ಭವನ, ನಾರ್ತ್ ಸೌತ್ ಬ್ಲಾಕ್ ಭವನಗಳನ್ನು 1931ರಲ್ಲಿ ನಿರ್ಮಿಸಿದ್ದರು. ಆದರೆ ಈ ವಿಸ್ಟಾ ಯೋಜನೆ ಪ್ರಕಾರ ಹೊಸ ಪಾರ್ಲಿಮೆಂಟ್ ಭವನ ನಿರ್ಮಿಸಬೇಕೆಂದು ಕೇಂದ್ರ ಸರ್ಕಾರ ನಿರ್ಣಯಿಸಿದೆ.

ಪ್ರಸ್ತುತ ಪರಿಸ್ಥಿತಿಗಳಲ್ಲಿ, ದೆಹಲಿಯ ಹೃದಯಭಾಗದಲ್ಲಿ 20,000 ಕೋಟಿ ರೂ.ವೆಚ್ಚದ ಕೇಂದ್ರ ವಿಸ್ಟಾ ಅಭಿವೃದ್ಧಿ ಯೋಜನೆ ಆರಂಭಿಸುವುದನ್ನು ತಡೆಹಿಡಿಯಬೇಕು ಆ ಹಣವನ್ನು ದೇಶದಲ್ಲಿ ಆಸ್ಪತ್ರೆಗಳಂತಹ ಮೂಲಸೌಕರ್ಯ ಒದಗಿಸಲು ಬಳಸಬೇಕು ಎಂದು ಸೋನಿಯಾಗಾಂಧಿ ಪ್ರಧಾನಿ ಮೋದಿಗೆ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.


ಇದನ್ನೂ ಓದಿ: ಬಿಹಾರ: ನಿತೀಶ್‌ ಸರ್ಕಾರಕ್ಕೆ ಲಾಲು ವಿಲನ್‌? BJP ಮೈತ್ರಿ ಸರ್ಕಾರಕ್ಕೆ ಸಂಚಕಾರ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights