ದ್ವಿತೀಯ ಪಿಯು ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕ ಪ್ರಕಟ..!

ಕೊರೊನಾದಿಂದಾಗಿ ಬಂದ್ ಆಗಿದ್ದ ಶಾಲಾ ಕಾಲೇಜುಗಳು ಓಪನ್ ಆಗುತ್ತಿದ್ದಂತೆ ಪರೀಕ್ಷೆಗಳು ಯಾವಾಗ ಎನ್ನುವ ಪ್ರಶ್ನೆ ಎಲ್ಲಾ ಪೋಷಕರಿಗೂ ಮೂಡಿತ್ತು. ಇದರ ಬೆನ್ನಲ್ಲೆ ಪರೀಕ್ಷೆಗಳಿಗೂ ದಿನಾಂಕ ನಿಗಧಿಯಾಗಿದೆ.

ಹೌದು.. ದ್ವಿತೀಯ ಪಿಯು ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ.

ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಕಲಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಸಚವ ಸುರೇಶ್ ಅವರು ಹೇಳಿದ್ದಾರೆ. ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತ ಎನ್ನುವ ಯಾವುದೇ ಪ್ರಸ್ತಾಪ ಇಲಾಖೆಯ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸಚಿವರು ತಿಳಿಸಿದ್ದಾರೆ. ಈಗಾಗಲೇ ಈ ಹತ್ತು ಹಾಗೂ ಎರಡನೇ ಪಿಯು ವಿದ್ಯಾರ್ಥಿಗಳಿಗೆ ತರಗತಿಗಳು ಕಳೆದ ಒಮದರಿಂದ ಆರಮಬವಾಗಿದ್ದು, ಹಾಜರಾತಿಯೂ ಉತ್ತೇಜಕವಾಗಿದೆ. ಶಾಲಾ ಬೋಧನೆ ಜೊತೆಜೊತೆಗೇ ಆನ್‌ಲೈನ್ ಶಿಕ್ಷಣವೂ ಮುಂದುವರಿದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights