ಹೃದಯ ಕದಡುವ ದುರಂತ : ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಬೆಂಕಿ : 10 ಶಿಶುಗಳು ದಾರುಣ ಸಾವು…!

ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಹತ್ತು ನವಜಾತ ಶಿಶುಗಳು ಮೃತಪಟ್ಟಿವೆ.

ಘಟನೆಯ ಸಮಯದಲ್ಲಿ ರಾಜ್ಯ ರಾಜಧಾನಿ ಮುಂಬಯಿಯಿಂದ 900 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ನಾಲ್ಕು ಅಂತಸ್ತಿನ ಆಸ್ಪತ್ರೆಯ ವಿಶೇಷ ನವಜಾತ ಆರೈಕೆ ಘಟಕದಲ್ಲಿ (ಎಸ್‌ಎನ್‌ಸಿಯು) ಹದಿನೇಳು ಶಿಶುಗಳನ್ನು ದಾಖಲಿಸಲಾಗಿತ್ತು. ಅಗ್ನಿಶಾಮಕ ದಳದ ಅಧಿಕಾರಿಗಳು ಇದರಲ್ಲಿ ಏಳು ಶಿಶುಗಳನ್ನು ರಕ್ಷಿಸಿದ್ದಾರೆ. ಇನ್ನುಳಿದ ಶಿಶುಗಳನ್ನು ಎಷ್ಟೇ ಪ್ರಯತ್ನ ಪಟ್ಟರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಕೆಲ ಶಿಶುಗಳು ಗಾಯಗೊಂಡಿವೆ. ಹೀಗಾಗಿ ಪ್ರಪಂಚವನ್ನು ಕಣ್ಣು ತೆಗೆದು ಸರಿಯಾಗಿ ನೋಡದ ಶಿಶುಗಳು ಸಾವನ್ನಪ್ಪಿವೆ.

ಘಟನೆ ಬಗ್ಗೆ ಟ್ವೀಟ್ ಮಾಡಿದ ಪಿಎಂ ಮೋದಿ, “ಮಹಾರಾಷ್ಟ್ರದ ಭಂಡಾರಾದಲ್ಲಿ ನಾವು ಅಮೂಲ್ಯವಾದ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. ಈ ಘಟನೆಯನ್ನು ಹೃದಯ ಕದಡುವ ದುರಂತ. ನನ್ನ ಆಲೋಚನೆಗಳು ಎಲ್ಲಾ ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆಂದು ನಾನು ಭಾವಿಸುತ್ತೇನೆ” ಎಂದು ಆಶಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರೊಂದಿಗೆ ಮಾತನಾಡಿದ್ದು, ಈ ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ. ಇಡೀ ಘಟನೆಯಲ್ಲಿ ತನಿಖೆಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರೊಂದಿಗೆ ಮಾತನಾಡಿ ಬೆಂಕಿ ಅವಘಡದ ಬಗ್ಗೆ ತನಿಖೆ ನಡೆಸುವಂತೆ ಹೇಳಿದ್ದಾರೆ “ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷ್ ವರ್ಧನ್ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.