ಗೋಹತ್ಯೆ ನಿಷೇಧ: ಬೀಫ್ ಮಾರಾಟ ಅಂಗಡಿಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ಬಂದಿದೆ. ಸುಗ್ರೀವಾಜ್ಞೆ ಜಾರಿಯಾದ ಬೆನ್ನಲ್ಲೇ ನಕಲಿ ಗೋಭಕ್ತರ ಅಟ್ಟಹಾಸಕ್ಕೆ ಬೀಫ್ ಮಾರಟದ ಅಂಗಡಿಗಳು ಸುಟ್ಟು ಕರಕಲಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಉಳ್ಳಾಲ ನಗರ ಸಭಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿರದ್ದ ಬೀಫ್ ಸ್ಟಾಲ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.
ತೊಕ್ಕೊಟ್ಟು ಮಾರುಕಟ್ಟೆಯಲ್ಲಿ ಕಳೆದ 50 ವರ್ಷಗಳಿಂದ ಮಾಂಸ ವ್ಯಾಪಾರ ಮಾಡುತ್ತಿದ್ದ 4 ತಾತ್ಕಾಲಿಕ ಶೆಡ್‌ಗಳ ಪೈಕಿ 2 ಅಂಗಡಿಗಳಿಗೆ ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದಾಗಿ ಅಂಗಡಿಗಳಲ್ಲಿದ್ದ ಸಾಕಷ್ಟ ಸಾಮಗ್ರಿಗಳು ಸಂಪೂರ್ಣ ಸುಟ್ಟು ನಾಶವಾಗಿವೆ.
ಸ್ಥಳಕ್ಕೆ ಉಳ್ಳಾಲ ನಗರಸಭೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಾತ್ಕಾಲಿಕ ಅಂಗಡಿ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ.
ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿದ್ದ ಉಳ್ಳಾಲದ ಬಜರಂಗದಳ- ವಿಶ್ವ ಹಿಂದೂ ಪರಿಷತ್ ಸಂಘಟನೆಗಳು, ಅಂಗಡಿಗಳನ್ನು ತೆರವುಗೊಳಸಬೇಕು ಎಂದು ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದವು.
ಇದನ್ನೂ ಓದಿ: ಬಿಜೆಪಿಯ ಬ್ರಾಹ್ಮಣ್ಯ v/s ಸಿದ್ದರಾಮಯ್ಯರ ಬಾಡೂಟ: ಮಾಂಸಾಹಾರದ ಬಗ್ಗೆ ಸಿದ್ದು ಹೇಳಿಕೆಗಳು ಹೀಗಿವೆ!