ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದ KSRTC ಬಸ್;‌ ಅಡ್ಡಗಟ್ಟಿ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಶಿಕ್ಷಣ ಸಚಿವ!

ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಬಸ್‌ಗಾಗಿ ಕಡ್ಡಾಯ ನಿಲುಗಡೆ ಸ್ಥಳದಲ್ಲಿ ಕಾಯುತ್ತಿದ್ದರೂ, ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಬಸ್ ನಿಲ್ಲಿಸದೇ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ಅಡ್ಡಗಟ್ಟಿ ಚಾಲಕನ್ನು ಶಿಕ್ಷಣ ಸಚಿವರು ತರಾಟೆಗೆ ತೆಗೆದುಕೊಂಡ ಘಟನೆ ಕೊರಟಗೆರೆ ತಾಲ್ಲೂಕಿನಲ್ಲಿ ಶನಿವಾರ ಬೆಳಿಗ್ಗೆ ಜರುಗಿದೆ.

ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಐ.ಕೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ರಾಜ್ಯ ಹೆದ್ದಾರಿಯಲ್ಲೇ ಬಸ್ಸನ್ನು ಅಡ್ಡಗಟ್ಟಿದ ಸಚಿವ ಸುರೇಶ್ ಕುಮಾರ್ ಅವರು ಚಾಲಕನನ್ನು ತರಾಟೆಗೆ ತೆಗೆದುಕೊಡ್ಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಬೆಂಗಳೂರಿನಿಂದ ದಾಬಸ್ ಪೇಟೆ ಹಾಗೂ ಕೊರಟಗೆರೆ ಮಾರ್ಗವಾಗಿ ಮಧುಗಿರಿಗೆ ತೆರಳುತ್ತಿದ್ದರು. ಮಧುಗಿರಿಯಲ್ಲಿ ದೂರ ತರಂಗ ಶಿಕ್ಷಣ ಅಭಿಯಾನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ತೆರಳಲು ಅನುಕೂಲ ಆಗುವಂತೆ ಸಾರಿಗೆ ಸಚಿವರ ಜತೆ ಚರ್ಚಿಸಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹಂಪಿ ದೇವಾಲಯದಲ್ಲಿ ವಸ್ತ್ರಸಂಹಿತೆ ಬ್ಯಾನರ್ ಹಾಕಿದ ಪುಂಡರು: ಪ್ರವಾಸಿಗರಲ್ಲಿ ಗೊಂದಲ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights