ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ: ಯಾರಿಗೆ ಸಿಗಲಿದೆ ಮಂತ್ರಿ ಭಾಗ್ಯ?

ಸಿಎಂ ಯಡಿಯೂರಪ್ಪನವರಿಗೆ ತಲೆನೋವಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಅಂತೂ ಹೈಕಮಾಂಡ್ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಅದೇ ಸಮಯದಲ್ಲಿ ಒಬ್ಬರು ಸಚಿವರನ್ನು ಸಂಪುಟದಿಂದ ಕೈಬಿಡಲಾಗಿದೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

“ನಾಯಕತ್ವ ಬದಲಾವಣೆ ಸೇರಿ ಎಲ್ಲ ರೀತಿಯ ಊಹಾಪೋಹಗಳಿಗೆ ವರಿಷ್ಠರು ತೆರೆ ಎಳೆದಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಹಸಿರು ನಿಶಾನೆ ತೋರಿದ್ದು, ಎಲ್ಲ ಹಿರಿಯ ಸಚಿವರನ್ನು ಸಂಪುಟದಲ್ಲಿ ಮುಂದುವರಿಸಲು ಸೂಚಿಸಿದ್ದಾರೆ” ಎಂದು ಪಕ್ಷದ ಮೂಲಗಳು ತಿಳಿಸಿವೆ.

“ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇದೇ 13 ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. 14 ರಂದು ಸಂಕ್ರಾಂತಿ ಇರುವ ಕಾರಣ 13 ರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯಲಿದೆ” ಎಂದು ಯಡಿಯೂರಪ್ಪ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷಕ್ಕೆ ವಲಸೆ ಬಂದವರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೆಯೇ ಸಂಪುಟದಿಂದ ಹೊರಗುಳಿಯುವ ಆ ಒಬ್ಬ ಸಚಿವರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಅಂಬಾನಿ ವಿರುದ್ದ ಸಿಡಿದ ದರ್ಶನ್: ಥಿಯೇಟರ್ ಓಪನ್ ಮಾಡದ ಹಿಂದಿದೆ ದೊಡ್ಡ ಹಗರಣ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights