ಮಧ್ಯಪ್ರದೇಶದಲ್ಲಿ ವಿಷಕಾರಿ ಮದ್ಯ ಸೇವಿಸಿ 11 ಜನ ಸಾವು : 7 ಮಂದಿ ಅಸ್ತವ್ಯಸ್ತ !

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ 11 ಜನರು ಸಾವನ್ನಪ್ಪಿದ್ದು ಆಸ್ಪತ್ರೆಗೆ ದಾಖಲಾದ ಏಳು ಜನರ ಸ್ಥಿತಿ ಗಂಭೀರವಾಗಿದೆ. ಮೊರೆನಾದ ಎರಡು ಪ್ರತ್ಯೇಕ ಹಳ್ಳಿಗಳಲ್ಲಿ ಈ ಘಟನೆ ನಡೆದಿದೆ. ಪಹವಾಲಿ ಗ್ರಾಮದಲ್ಲಿ ಮೂರು ಜನರು ಸಾವನ್ನಪ್ಪಿದ್ದರೆ, ಮೊರೆನಾದ ಮನ್ಪುರ್ ಗ್ರಾಮದಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೊರೆನಾದ ಸ್ಥಳೀಯ ಚಿಕಿತ್ಸಾಲಯದಲ್ಲಿ ಇನ್ನೂ ಏಳು ಮಂದಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಸ್ಥಳೀಯವಾಗಿ ತಯಾರಿಸಿದ ಮದ್ಯೆ ಸೇವನೆಯೇ ಇದಕ್ಕೆ ಕಾರಣ ಎಂದ ಎಸ್ಪಿ ಅನುರಾಗ್ ಸುಜಾನಿಯಾ, “ಜನರು ಅದನ್ನು ಸೇವಿಸಿದ ನಂತರ ತಡರಾತ್ರಿ ವಾಂತಿ, ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಆಸ್ಪತ್ರೆಗೆ ಸಾಗಿಸುವಾಗ 10 ಜನರು ಸಾವನ್ನಪ್ಪಿದರೆ, ಒಬ್ಬರು ಮೊರೆನಾದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೊರೆನಾ ಜಿಲ್ಲಾ ಆಸ್ಪತ್ರೆಯಲ್ಲಿ ಸತ್ತವರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ನಕಲಿ ಮದ್ಯದ ನಿಖರವಾದ ಮೂಲವು ತಿಳಿದುಬಂದಿಲ್ಲ” ಎಂದು ಹೇಳಿದ್ದಾರೆ.

ಮಂಗಳವಾರ ಮುಂಜಾನೆ ಮೊರೆನಾ ಜಿಲ್ಲಾ ಆಸ್ಪತ್ರೆಯಲ್ಲಿ ಹೇಳಿದ ಗ್ರಾಮಸ್ಥರ ಪ್ರಕಾರ, “ಸ್ಥಳೀಯವಾಗಿ ತಯಾರಿಸಿದ ಮದ್ಯ ಈ ಪ್ರದೇಶದಲ್ಲಿ ಸುಲಭವಾಗಿ ಲಭ್ಯವಿರುತ್ತದೆ. ಅಬಕಾರಿ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ತಿಳಿದೇ ಗ್ರಾಮದಲ್ಲಿ ಮದ್ಯ ಮಾರಾಟವಾಗುತ್ತದೆ. ಇಂತಹ ದುರಂತಗಳು ಸಂಭವಿಸಿದಾಗ ಅವರು ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತಾರೆ ಆದರೆ ಅವರು ಮಾರಾಟವನ್ನು ಏಕೆ ತಡೆಯಲು ಸಾಧ್ಯವಿಲ್ಲ? ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಸಕ್ರಿಯವಾಗಿ ಇದರಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಇದೇ ರೀತಿಯ ಪ್ರಕರಣ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಲಬೆರಕೆ ಮಾಡಿದ ತೊಗರಿ ಸೇವಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯೊಬ್ಬರು ಭಾನುವಾರ ಸಾವನ್ನಪ್ಪಿದ್ದಾರೆ. ಮಹಿಳೆಯರು ಸೇರಿದಂತೆ 143 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯಕ್ಕೆ ಒಳಗಾದವರಲ್ಲಿ ಅನೇಕರು ವಾಕರಿಕೆ ಮತ್ತು ನಡುಕಗಳ ಬಗ್ಗೆ ದೂರು ನೀಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಗೆ ಬರುವ ಜನರ ಸಂಖ್ಯೆ ಹೆಚ್ಚಾದಾಗ, ಅವರೆಲ್ಲರೂ ನಕಲಿ ಮದ್ಯ ಸೇವಿಸಿರುವುದು ಕಂಡುಬಂದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights