ಕಾಂಗ್ರೆಸ್‌ ಸಚಿವನ ವಿರುದ್ದ ಅತ್ಯಾಚಾರ ಆರೋಪ; ಪೊಲೀಸರಿಗೆ ದೂರು ನೀಡಿದ ಗಾಯಕಿ!

ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಕಾನೂನು ಸಚಿವರಾಗಿರುವ ಕಾಂಗ್ರೆಸ್‌ ಮುಖಂಡ ಧನಂಜಯ ಮುಂಡೆ ಅವರ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ. ಧನಂಜಯ ಮುಂಡೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ಪೊಲೀಸರು ಇದೂವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಧನಂಜಯ್ ಮುಂಡೆ ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಈ ಹಿಂದೆ ಒಶಿವೊರಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದೆ, ಆದರೆ ಅವರು ಕ್ರಮ ಕೈಕೊಂಡಿಲ್ಲ. ಕೂಡಲೇ ಸಚಿವ ಧನುಂಜಯ ಮುಂಡೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಆಯುಕ್ತ ಪರಂ ಭೀರ್ ಸಿಂಗ್ ಅವರಿಗೆ ರೇಣು ಶರ್ಮಾ ಪತ್ರ ಬರೆದಿದ್ದಾರೆ.

ಜನವರಿ 10 ರಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ. ಆದರೆ, ಪೊಲೀಸರು ಇನ್ನೂ ದೂರು ದಾಖಲಿಸಿಕೊಂಡಿಲ್ಲ. ನನ್ನ ಜೀವಕ್ಕೆ ಅಪಾಯವಿದೆ. ಈ ವಿಷಯವಾಗಿ ತಮಗೆ ಪ್ರಧಾನಿ ಮೋದಿ ಮತ್ತು ಮಹಾರಾಷ್ಟ್ರ ಬಿಜೆಪಿ ನಾಯಕ, ಮಾಜಿ ಸಿಎಂ ಫಡ್ನವೀಸ್‌ ಸಹಾಯ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ದೂರಿನ ಪತ್ರದ ಜೊತೆಗೆ ಮನವಿ ಮಾಡಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪವನ್ನು ತಳ್ಳಿಹಾಕಿರುವ ಧನಂಜಯ್‌ ಮುಂಡೆ, ಆರೋಪ ಮಾಡುತ್ತಿರುವ ಮಹಿಳೆ ಮತ್ತು ಅವರ ಸಹೋದರಿ ನನಗೆ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸುತ್ತಿದ್ದಾರೆ. ಈ ಕುರಿತು 2020ರ ನವೆಂಬರ್ ತಿಂಗಳಿನಲ್ಲಿಯೇ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. 2003ರವರೆಗೂ ನಾನು ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದೆ, ನಮಗೆ ಇಬ್ಬರು ಮಕ್ಕಳಿದ್ದಾರೆ. ಮನೆಯವರೂ ಕೂಡ ನಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಧನಂಜಯ್ ಮುಂಡೆ ಅವರು ಗಾಯಕಿಯೊಂದಿಗಿನ ಸಂಬಂಧ ಒಪ್ಪಿಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಂ ಉದ್ಧವ್ ಠಾಕ್ರೆಗೆ ಬಿಜೆಪಿ ಮಹಿಳಾ ಘಟಕ ಪತ್ರ ಬರೆದಿದೆ.


ಇದನ್ನೂ ಓದಿ: ಕೃಷಿ ಕಾಯಿದೆಗಳು ಮತ್ತು ಆದಾನಿ, ಅಂಬಾನಿಗಳ ಲಾಭಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights