ತಣ್ಣಗಾಗಿಲ್ಲ BJP ಅತೃಪ್ತರ ಬೇಗುದಿ; ಅಮಿತ್‌ ಶಾಗೆ ದೂರು ನೀಡಲು ಸರದಿಯಲ್ಲಿದೆ ದಂಡು!

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಚಿವ ಸ್ಥಾನ ಸಿಗದ ಅಪೃಪ್ತರ ಬೇಗುದಿ ಭುಗಿಲೆದ್ದಿದೆ. ರಾಜ್ಯ ಬಿಜೆಪಿ ನಾಯಕರು ಮತ್ತು ಸಿಎಂ ಬಿಎಸ್‌ವೈ ವಿರುದ್ಧ ಸಿಡಿಯುತ್ತಿರುವ ಅತೃಪ್ತ ಶಾಸಕರು ಬಿಜೆಪಿ ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಏನಾಗಿದೆ ಎಂಬುದುರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಆದರೆ, ರಾಜ್ಯದಲ್ಲೇ ಇರುವ ಉಳಿದ ಅತೃಪ್ತರು ರಾಜ್ಯಗೆ ಆಗಮಿಸಿರುವ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ದೂರು ನೀಡಲು ನಿರ್ಧರಿಸಿದ್ದಾರೆ.

ರಾಜ್ಯ ಭೇಟಿಗೆ ಆಗಮಿಸಿರುವ ಅಮಿತ್ ಶಾ, ಶನಿವಾರ ಹಾಗೂ ಭಾನುವಾರ ಎರಡು ದಿನಗಳ ಕಾಲ ರಾಜ್ಯದಲ್ಲಿ ಉಳಿಯಲಿದ್ದಾರೆ. ಶನಿವಾರದ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ನಾಳೆ ಬೆಳಗಾವಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಹೀಗಾಗಿ, ಈ ಸಮಯದಲ್ಲಿ ಅತೃಪ್ತ ಶಾಸಕರ ಟೀಂ, ಅಮಿತ್ ಶಾ ಅವರನ್ನು ಇಂದು ಅಥವಾ ನಾಳೆ ಭೇಟಿ ಮಾಡಿ ದೂರು ನೀಡಲು ಕಾಯುತ್ತಿದ್ದಾರೆ.ಅಮಿತ್ ಶಾ ಭೇಟಿಗೆ ಸಮಯ ಹೇಳಿದ್ದೇನೆ ಎಂದು ಎಂಎಲ್‍ಸಿ ಹೆಚ್.ವಿಶ್ವನಾಥ್ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದಲಿತರ ತಲೆದಂಡ ಮಾಡುವ BJP; ಸಾಕ್ಷಿಯಿದ್ದರೂ ಬಿ.ಸಿ ಪಾಟೀಲ್‌ರಿಂದ ರಾಜೀನಾಮೆ ಪಡೆದಿಲ್ಲವೇಕೆ?: ಹೆಚ್‌ಸಿ ಮಹದೇವಪ್ಪ

ಸಂಪುಟದಲ್ಲಿ ಸಚಿವ ಸ್ಥಾನದ ಸಿಗದೇ ಇರುವುದು, ಆಡಳಿತ ಹಾಗೂ ಪಕ್ಷದಲ್ಲಿ ಬಿಎಸ್‍ವೈ ಪುತ್ರ ವಿಜಯೇಂದ್ರ ಹಸ್ತಕ್ಷೇಪ ನಡೆಸುತ್ತಿರುವುದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಸ್ಥಾನ ಸಿಗದೇ ಇದ್ದವರು ಬಹಿರಂಗ ಹೇಳಿಕೆ ನೀಡುವ ಬದಲು ಹೈಕಮಾಂಡ್ ನಾಯಕರಿಗೆ ದೂರು ನೀಡಲಿ, ನನ್ನದೇನೂ ಅಭ್ಯಂತರ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಅತೃಪ್ತ ಬಣಕ್ಕೆ ಅಸ್ತ್ರವಾಗಿ ಸಿಕ್ಕಿದೆ. ಹೀಗಾಗಿ ಬೆಂಗಳೂರು ಅಥವಾ ಬೆಳಗಾವಿಯಲ್ಲಿ ದೂರು ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಅಭಯ್ ಪಾಟೀಲ್, ಅರವಿಂದ ಬೆಲ್ಲದ್, ಸಿದ್ದು ಸವದಿ, ಯತ್ನಾಳ್ ಸೇರಿದಂತೆ 10ಕ್ಕೂ ಹೆಚ್ಚು ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರಿಗೆ ದೂರು ನೀಡಲು ತೀರ್ಮಾನಿಸಿದ್ದರು. ಇದೀಗ ದೆಹಲಿಗೆ ತೆರಳುವ ನಿರ್ಧಾರ ಬದಲಿಸಿ ಅಮಿತ್ ಶಾ ಅವರಿಗೆ ಕರ್ನಾಟಕದಲ್ಲಿಯೇ ದೂರು ನೀಡಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಬೆಂಗಳೂರಿಗೆ ಅಮಿತ್ ಶಾ: ಭಿಕ್ಷುಕರು ಮತ್ತು ನಾಯಿಗಳ ಸೆರೆ; ವಿಧಾನಸೌಧ ಸಿಬ್ಬಂದಿಗೆ ಅರ್ಧ ದಿನ ರಜೆ: ಜನರ ಆಕ್ರೋಶ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights