ದಲಿತರ ತಲೆದಂಡ ಮಾಡುವ BJP; ಸಾಕ್ಷಿಯಿದ್ದರೂ ಬಿ.ಸಿ ಪಾಟೀಲ್‌ರಿಂದ ರಾಜೀನಾಮೆ ಪಡೆದಿಲ್ಲವೇಕೆ?: ಹೆಚ್‌ಸಿ ಮಹದೇವಪ್ಪ

ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ಸಾಕ್ಷಿ ಸಮೇತ ಅಲ್ಲಿನ ನೌಕರರು ದೂರು ನೀಡಿದ್ದಾರೆ. ಆದರೂ ಬಿ.ಸಿ.ಪಾಟೀಲ್‌ ಅವರಿಂದ ರಾಜೀನಾಮೆ ಪಡೆದುಕೊಂಡಿಲ್ಲ. ಆದರೆ, ಕೇವಲ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಶ್‌ ಅವರಿಂದ ರಾಜೀನಾಮೆ ಪಡೆದುಕೊಳ್ಳಲಾಗಿದೆ. ಸದ್ಯ ಈ ಪ್ರಕರಣಗಳು ಬಿಜೆಪಿ ಸರ್ಕಾರದ ವಿರುದ್ದ ಭಾರೀ ಚರ್ಚೆಗೆ ಕಾರಣವಾಗಿವೆ.

ದಲಿತರ ಮೇಲೆ ಕೇವಲ ಆರೋಪ ಕೇಳಿ ಬಂದರೂ ತಲೆದಂಡ ಮಾಡುವ ಬಿಜೆಪಿ ಸರ್ಕಾರ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಗಳಿದ್ದರೂ ಸಚಿವ ಬಿ.ಸಿ.ಪಾಟೀಲ್‌ ಅವರಿಂದ ರಾಜೀನಾಮೆ ಪಡೆದುಕೊಳ್ಳದೆ ಮೌನ ವಹಿಸುವ ಮೂಲಕ ಮನುವಾದಿ ಧೋರಣೆಯನ್ನು ಪ್ರದರ್ಶಿಸಿದೆ ಎಂದು ಹಲವು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌‌ ಮುಖಂಡ ಮತ್ತು ಮಾಜಿ ಸಚಿವ ಡಾ.ಎಚ್‌ ಸಿ ಮಹದೇವಪ್ಪ ಅವರು ಮಾಜಿ ಸಚಿಪ ಎಚ್‌ ನಾಗೇಶ್‌ ಮತ್ತು ಬಿ.ಸಿ ಪಾಟೀಲ್‌ ಅವರ ಹೆಸರನ್ನು ಪ್ರಸ್ತಾಪಿಸದೆಯೇ ಲಂಚಕ್ಕಾಗಿ ಬೇಡಿಕೆ ಇರಿಸಿದ್ದ ಪ್ರಕರಣದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಲಿತರ ಮೇಲೆ ಕೇವಲ ಆರೋಪ ಬಂದರೂ ಅವರ ತಲೆದಂಡ ಮಾಡುವ ಮನುವಾದಿ BJP ಸರ್ಕಾರ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಾಕ್ಷಿಗಳಿದ್ದರೂ ಅಂತವರ ಬಗ್ಗೆ ಮೌನ ವಹಿಸುತ್ತದೆ. ಮುಖ್ಯಮಂತ್ರಿಗಳೇ ಭ್ರಷ್ಟಾಚಾರವನ್ನು ಜಾತಿ ನೋಡಿ ಅಳೆಯುವ ನಿಮ್ಮ ದಲಿತ ವಿರೋಧಿ ನೀತಿಯನ್ನು ಬದಿಗಿಟ್ಟು ನ್ಯಾಯಯುತವಾಗಿ ಕ್ರಮ ವಹಿಸಿ ತನಿಖೆಗೆ ಸೂಚನೆ ನೀಡಿ ಎಂದು ಮಹಾದೇವಪ್ಪ ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

ಪ್ರಕರಣಧ ಹಿನ್ನೆಲೆ:

ಕೃಷಿ ಇಲಾಖೆಯಲ್ಲಿ ಗ್ರೂಪ್‌ ಎ, ಬಿ ಮತ್ತು ಸಿ ಗು೦ಪಿನ ಅಧಿಕಾರಿ, ನೌಕರರ ವರ್ಗಾವಣೆಗಾಗಿ ಸಚಿವ ಬಿ ಸಿ ಪಾಟೀಲ್‌ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇರಿಸಿದ್ದರು ಎ೦ಬ ಗುರುತರವಾದ ಆರೋಪ ಕೇಳಿ ಬ೦ದಿತ್ತು. ಈ ಸ೦ಬ೦ಧ ಸಚಿವರು ಮತ್ತು ಅವರ ಆಪ್ತಕೂಟ ಅಧಿಕಾರಿಗಳೂ೦ಂದಿಗೆ ನಡೆಸಿದ್ದ ಮಾತುಕತೆಯ ಧ್ವನಿ ಮತ್ತು ದೃಶ್ಯಾವಳಿಗಳ ಸಮೇತ ಸ೦ತ್ರಸ್ತ ಅಧಿಕಾರಿ, ನೌಕರರು ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿಗೂ ಲಿಖಿತ ದೂರು ಸಲ್ಲಿಸಿದ್ದರು.

ಸಚಿವ ಬಿ ಸಿ ಪಾಟೀಲ್‌ ಅವರ ಹೆಸರು ಬಳಸಿ ಅವರ ಆಪ್ರಕೂಟ ಕೃಷಿ ಇಲಾಖೆ ಅಧಿಕಾರಿ, ನೌಕರರುಗಳಿಂದ ಲಕ್ಷಗಟ್ಟಲೇ ಸುಲಿಗೆ ಮಾಡಿದೆ ಎ೦ದು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರ ಸದ್ದು ಮಾಡಿರುವ ಬೆನ್ನಲ್ಲೇ ಇದೇ ಇಲಾಖೆಯ ಗ್ರೂಪ್‌ ಎ, ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ ನೌಕರರ ವರ್ಗಾವಣೆಯಲ್ಲಿೀಯೂ ಲ೦ಚಕ್ಕಾಗಿ ಬೇಡಿಕೆ ಇರಿಸಲಾಗಿತ್ತು ಎ೦ಬ ಮಾಹಿತಿಯನ್ನು ಸ್ವತಃ ಕೆಲ ಅಧಿಕಾರಿ, ನೌಕರರುಗಳೇ ಈ ಕುರಿತು ಒಂದಷ್ಟು ಅಧಿಕಾರಿಗಳು ಲಿಖಿತವಾಗಿ ಮುಖ್ಯಮಂತ್ರಿಗೆ 2020ರ ಜುಲೈ 1ರಂದು ಪತ್ರ ಮುಖೇನ ಗಮನಕ್ಕೆ ತಂದಿದ್ದರು.

“2020-21ನೇ ಸಾಲಿನ ಗ್ರೂಪ್‌ ಎ, ಗ್ರೂಪ್‌ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ/ನೌಕರರಿಗೆ ಮಾತ್ರ ಅನ್ವಯವಾಗುವಂತೆ 2020ರ ಜುಲೈ 10ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರುಗಳಿಗೆ ಅಧಿಕಾರಿ ಪ್ರತ್ಯಾಯೋಜಿಸಲಾಗಿದೆ. ಈ ಆದೇಶದ ಹಿನ್ಮೆಲೆಯಲ್ಲಿ ಕೃಷಿ ಸಚಿವರಿಗೆ ಹಣ ಸ೦ದಾಯ ಮಾಡಬೇಕು ಎ೦ಬ ಸಬೂಬು ಹೇಳಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿ/ನೌಕರರು ವರ್ಗಾವಣೆ ಪಡೆಯಬೇಕಾದರೆ ಅಥವಾ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಲ್ಲಿಯೇ ಮು೦ದುವರೆಯಬೇಕಾದರೆ ಲಕ್ಷ ರು.ಗಳನ್ನು ಕಡ್ಡಾಯವಾಗಿ ನೀಡಬೇಕು; ಎ೦ದು ಆದೇಶ ನೀಡಿರುತ್ತಾರೆ ಎ೦ದು ಪತ್ರದಲ್ಲಿ ವಿವರಿಸಿದ್ದರು.

ಸಚಿವ ಬಿ ಸಿ ಪಾಟೀಲ್‌ ಅವರ ಆಪ್ತ ಕಾರ್ಯದರ್ಶಿ ಕೆಎಎಸ್‌ ಅಧಿಕಾರಿ ಸಿ ಎಲ್‌ ಶಿವಕುಮಾರ್‌, ಎ ಸಿ ಮಂಜುನಾಥ್‌, ದಯಾನ೦ದ ಎಂಬುವರಿಗೆ ಹಣ ಸ೦ದಾಯ ಮಾಡಿರುವ ಪಟ್ಟಿಯನ್ನೂ ಕೃಷಿ ಇಲಾಖೆ ಸಿಬ್ಬ೦ದಿಗಳು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದರು.

ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್‌ 50 ಲಕ್ಷ, ಅಪರ ನಿರ್ದೇಶಕರುಗಳು 50 ಲಕ್ಷ, ಬೆಳಗಾವಿ ಜ೦ಟಿ ನಿರ್ದೇಶಕರು (ಜಿಲಾನಿ ಮತ್ತು ಪಾಟೀಲ್‌) 2 ಕೋಟಿ, ಕಲ್ಬುರ್ಗಿ ಜ೦ಟಿ ನಿರ್ದೇಶಕ (ಸೂಗೂರು) 1 ಕೋಟಿ, ರೂಪಾದೇವಿ 75 ಲಕ್ಷ, ಅಪರ ನಿರ್ದೇಶಕರು(ದಿವಾಕರ) 1 ಕೋಟಿ, ಚಿಕ್ಕಬಳ್ಳಾಪುರ ಜ೦ಟಿ ನಿರ್ದೇಶಕರು (ರೂಪ) 50 ಲಕ್ಷ, ದಾವಣಗೆರೆ ಜ೦ಟಿ ನಿರ್ದೇಶಕರು 50 ಲಕ್ಷ, ಜ೦ಟಿ ನಿರ್ದೇಶಕರು ಹಾವೇರಿ (ಮ೦ಜುನಾಥ್‌) 1 ಕೋಟಿ ನೀಡಿದ್ದಾರೆ ಎ೦ಬುದನ್ನು ಕೃಷಿ ಇಲಾಖೆ ಸಿಬ್ಬ೦ದಿ ಮುಖ್ಯ ಕಾರ್ಯದರ್ಶಿಗೆ ಪಟ್ಟಿ ಸಮೇತ ಸಲ್ಲಿಸಿದ್ದ ದೂರಿನಲ್ಲಿ ಉಲ್ಲೆಖಿಸಲಾಗಿತ್ತು.

ಇದನ್ನೂ ಓದಿ: ‌ವರ್ಗಾವಣೆ ಭ್ರಷ್ಟಾಚಾರದಲ್ಲಿ ಸಚಿವ ಬಿಸಿ ಪಾಟೀಲ್‌! ಮುಖ್ಯಮಂತ್ರಿಗೆ ಸಾಕ್ಷ್ಯ ಕೊಟ್ಟ ನೌಕರರು!

ಆಪ್ತ ಕಾರ್ಯದರ್ಶಿ ಶಿವಕುಮಾರ್‌, ದಯಾನ೦ದ್‌ ಮತ್ತು ಮ೦ಜುನಾಥ್‌ ಎ೦ಬುವರು ಇಲಾಖೆಯ ಅಧಿಕಾರಿ, ನೌಕರರುಗಳಿಗೆ ವಾಟ್ಸಾಪ್‌ ಕರೆ ಮಾಡುವ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದ ನೌಕರರು, ಕೃಷಿ ಯಾಂತ್ರೀಕರಣ, ಕೃಷಿ ಪರಿಕರ, ಕೀಟನಾಶಕಗಳು, ಸ್ಟಿ೦ಕಲ್‌/ಡ್ರಿಪ್‌ಗಳ ಅನುದಾನ ನೀಡುವುದರಲ್ಲಿಯೂ ಲೂಟಿ ಮಾಡಿದ್ದಾರೆ ಎ೦ದು ದೂರಿನಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

“ನಾವು ಕೆಳಮಟ್ಟದ ಇಲಾಖೆಯ ಸೇವಕರಾಗಿ ಕಲಸ ನಿರ್ವಹಿಸುತ್ತಿದ್ದು ನಮ್ಮ ಸ೦ಬಳದಲ್ಲಿ ನಮ್ಮ ಸ೦ಸಾರ ನಡೆಸುವುದೇ ಕಷ್ಟಕರವಾಗಿದೆ. ನಮಗೆ ಏನಾದರೂ ಮಾಡಿದರೆ ಹೇಗೆ ಎ೦ದು ಹಣ ಹೊಂ೦ದಿಸುತ್ತಿದ್ದೇವೆ. ಇದು ಹೀಗೆ ಮುಂದುವರೆದರೆ ರೈತರ ಆತ್ಮಹತ್ಯೆ ಬದಲು ರೈತ ಇಲಾಖೆ ಅಧಿಕಾರಿಗಳು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಸಮಯ ದೂರವಿಲ್ಲ. ಇದರಿ೦ದ ಮಾನಸಿಕ ಹಿ೦ಸೆ ಅನುಭವಿಸುವುದಕ್ಕಿಂತ ಅದೇ ಮೇಲು; ಉ೦ದು ಅಧಿಕಾರಿ, ನೌಕರರು ಅಳಲು ವ್ಯಕ್ತಪಡಿಸಿರುವುದು ಪತ್ರದಿ೦ದ ಗೊತ್ತಾಗಿದೆ.

“ಅನುದಾನ ಯಾರಿಗೆ ಕೊಡಬೇಕು ಎ೦ದು ಖಜೆಿ೦ಟರುಗಳು ಮಂತ್ರಿಗಳ ಕಚೇರಿ, ವಸೂಲಿಗಾಗಿ ಪ್ರತ್ಯೇಕ ಕಚೇರಿ ತೆರೆದು ಯಾರು ಹೆಚ್ಚಿನ ಕಮಿಷನ್‌ ನೀಡುತ್ತಾರೋ ಉಪಕರಣಗಳು ಗುಣಮಟ್ಟದಿ೦ದ ಕೂಡಿಲ್ಲದಿದ್ದರೂ ಆಪ್ತ ಕಾರ್ಯದರ್ಶಿ, ಖಾಸಗಿ ಏಜೆ೦ಟರುಗಳು ಸೂಚಿಸುವ ವ್ಯಕ್ತಿಗಳಿಗೆ ಜ೦ಟಿ ನಿರ್ದೇಶಕರುಗಳು ಇಂಡೆ೦ಟ್‌ಗಳನ್ನು ನೀಡಬೇಕು. ಎಲ್ಲದಕ್ಕೂ ಮಂತ್ರಿಗಳ ಹೆಸರನ್ನು ಹೇಳಲಾಗುತ್ತಿದೆ ಎ೦ದು ದೂರಿನಲ್ಲಿ ಆರೋಪಿಸಿದ್ದರು.


ಇದನ್ನೂ ಓದಿ: ಲಂಚಕ್ಕೆ ಬೇಡಿಕೆ ಇಟ್ಟ ಬಿಸಿ ಪಾಟೀಲ್; ಸಾಕ್ಷಿ ಇದ್ರೂ ರಾಜೀನಾಮೆ ಪಡೆಯುತ್ತಿಲ್ಲ ಏಕೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights