ದೇಶಾದ್ಯಂತ ಕೊರೊನಾಸುರನ ಸಂಹಾರಕ್ಕೆ ಕೌಂಟ್ಡೌನ್ ಶುರು..! ಲಸಿಕೆ ವಿತರಣೆಗೆ ಸಕಲ ಸಿದ್ಧತೆ!
ಕೊರೊನಾ ಲಸಿಕೆ ವಿತರಣೆಗೆ ಇನ್ನೂ ಕೆಲವೇ ನಿಮಿಷಗಳು ಬಾಕಿ ಇದ್ದು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ನೀಡಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ತಾಂತ್ರಿಕ ದೋಷದಿಂದ ಫಲಾನುಭವಿಗಳಿಗೆ ಮೆಸೇಜ್ ಹೋಗದ ಹಿನ್ನಲೆಯಲ್ಲಿ ಕಲೆ ಮಾಡಿ ಫಲಾನುಭವಿಗಳಿಗೆ ಲಸಿಕೆ ಪಡೆಯುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
ಮೊದಲು 3 ಕೋಟಿ ಕೊರೊನಾ ವಾರಿಯಾರ್ಸ್ ಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಆಸ್ಪತ್ರೆ ಸಿಬ್ಬಂದಿಗಳು, ಆರೋಗ್ಯ ಕಾರ್ಯಕರ್ತರು, ಅರೆವೈದ್ಯಕೀಯ, ಪೊಲೀಸ್ ಇಲಾಖೆ, ಸಶಸ್ತ್ರ ಪಡೆ, ದಾದಿಗಳು, ಮೇಲ್ವಿಚಾರಕರು, ಖಾಸಗಿ ಆಸ್ಪತ್ರೆ ಸಿಬ್ಬಂದಿಗಳು, ನಾಗರಿಕ ರಕ್ಷಣ ಸಿಬ್ಬಂದಿ, ಪೌರ ಕಾರ್ಮಿಕರು, ಜೈಲು ಸಿಬ್ಬಂದಿ, 50ರಿಂದ60 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ, ಗಂಭೀರವಾಗಿ ರೋಗಗಳಿಗೆ ತುತ್ತಾಗಿರುವವರಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗುತ್ತದೆ.
ದೇಶದ 3006 ಲಸಿಕಾ ಕೇಂದ್ರದಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭಗೊಳ್ಳಲಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಇನ್ನೂ ಅರ್ಧಗಂಟೆಯಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಡಲಿದ್ದಾರೆ.