ಮದುವೆಯ ನೆಪದಲ್ಲಿ ಅತ್ಯಾಚಾರ : ಪೈಲಟ್ ವಿರುದ್ಧ ಟಿವಿ ನಟಿ ಆರೋಪ…!
ಮದುವೆಯ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆಂದು ಟಿವಿ ನಟಿಯೊಬ್ಬರು ಪೈಲಟ್ ವಿರುದ್ಧ ಮುಂಬೈನ ಓಶಿವಾರ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.
ನಟಿ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಆರೋಪಿಯನ್ನು ಭೇಟಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. “ಆರೋಪಿ ಪೈಲಟ್ ಆಗಾಗ್ಗೆ ಸಂತ್ರಸ್ತೆಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದನು. ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಚಾಟ್ ಮಾಡುತ್ತಿದ್ದರು. ಹತ್ತು ದಿನಗಳ ಹಿಂದೆ ಆರೋಪಿ ಅವಳನ್ನು ಭೇಟಿಯಾಗಲು ಬಯಸಿದ್ದಾಗಿ ಹೇಳಿದ್ದನು. ನಂತರ ಆರೋಪಿ ಆಕೆ ಮನೆಗೆ ಹೋಗಿ ಅವಳನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ” ಎಂಬುವುದು ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ.
ಅದರ ನಂತರ ಆರೋಪಿ ಹಲವಾರು ಬಾರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. “ಕೆಲವು ದಿನಗಳ ನಂತರ ಆರೋಪಿ ಅವಳೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದಾನೆ. ಮಹಿಳೆ ಈ ವಿಷಯದ ಬಗ್ಗೆ ಅವನೊಂದಿಗೆ ಮಾತನಾಡಿದಾಗ ಅವನು ಮದುವೆಯಾಗಲು ನಿರಾಕರಿಸಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.