ಕೇಂದ್ರ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆಗೆ ಮೋದಿ ಕರೆ..!

ಕೊರೊನಾ ಕಾರಣದಿಂದ ಮುಂದೂಡಲಾಗಿದ್ದ ಕೇಂದ್ರ ಬಜೆಟ್ ಅಧಿವೇಶನದ ದಿನಾಂಕ ಫೆಬ್ರವರಿ 1 ರಂದು ನಿಗಧಿಯಾಗಿದ್ದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.

ಕೊರೊನಾ ಹರಡುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ ಜನವರಿ 29ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದು, ಪ್ರಮುಖವಾಗಿ ಕಾಂಗ್ರೆಸ್ ವಿವಾದಾತ್ಮಕ ಕೃಷಿ ಕಾನೂನುಗಳು, ರೈತರ ಪ್ರತಿಭಟನೆ ಮತ್ತು ಕೊರೋನಾ ಬಗ್ಗೆ ಧ್ವನಿ ಎತ್ತಲಿದೆ.

ಇನ್ನೂ ಭಾರತ ಮತ್ತು ಚೀನಾ ಗಡಿಯಲ್ಲಿ ‌ನಿರ್ಮಾಣವಾಗಿರುವ ಉದ್ವಿಗ್ನತೆ ಬಗ್ಗೆ, ಪುಲ್ವಾಮಾ ದಾಳಿಯ ಮಾಹಿತಿಗಳು ಸೋರಿಕೆಯಾದ ಬಗ್ಗೆ, ದೇಶದಲ್ಲಿ ಹಿಂದೆಂದೂ ಕಂಡರಿಯದ ಆರ್ಥಿಕ‌ ಬಿಕ್ಕಟ್ಟು ಸೃಷ್ಟಿಯಾಗಿರುವ ಬಗ್ಗೆ, ನಿರುದ್ಯೋಗ ಸಮಸ್ಯೆ ಬಗ್ಗೆ ಮತ್ತು ಪೆಟ್ರೋಲ್, ಡೀಸೆಲ್‌, ಗ್ಯಾಸ್ ಸಿಲಿಂಡರ್ ಗಳ ಬೆಲೆ ಏರಿಕೆ ಆಗಿರುವ ಬಗ್ಗೆ ಚರ್ಚಿಸಲು ಪ್ರಯತ್ನಿಸಲಿದೆ. ಈ ಹಿನ್ನೆಲೆಯಲ್ಲಿ ಇತರೆ ಪಕ್ಷಗಳನ್ನು ಮೊದಲೇ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸರ್ವ ಪಕ್ಷ ಸಭೆ ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಜನವರಿ 30 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಬಜೆಟ್ ಅಧಿವೇಶನವು ಜನವರಿ 29 ರಿಂದ ಫೆಬ್ರವರಿ 15 ರವರೆಗೆ ಮತ್ತು ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಎರಡು ಭಾಗಗಳಲ್ಲಿ ನಡೆಯಲಿದೆ.ಈ ವರ್ಷದ ಬಜೆಟ್​ ಸಚಿವೆ ನಿರ್ಮಾಲಾ ಸೀತಾರಾಮನ್​ ಮಂಡಿಸುತ್ತಿರುವ ಮೂರನೇ ಪೂರ್ಣಾವಧಿ ಬಜೆಟ್​ ಆಗಿರುವ ಕಾರಣ ಸಾಕಷ್ಟು ನಿರೀಕ್ಷೆಗಳೂ ಗರಿಗೆದರಿವೆ.

Spread the love

Leave a Reply

Your email address will not be published. Required fields are marked *