ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ : ಸಿದ್ದರಾಮಯ್ಯ, ಡಿಕೆಶಿ ಖಾಕಿ ವಶಕ್ಕೆ!

ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರಾಜ್ಯ ರಾಜಧಾನಿಯಲ್ಲಿ ನಡೆದ ರೈತರ ಪ್ರತಿಭಟನೆಗೆ ಸಾಥ್ ನೀಡಿದ್ದ ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ಬೆಳಿಗ್ಗೆ ರಾಜ್ಯರಾಜಧಾನಿಯಲ್ಲಿ ಕೈ ನಾಯಕರೊಂದಿಗೆ ರೈತರು ರಣಕಹಳೆ ಮೊಳಗಿಸಿದ್ದು ಕೃಷಿ ಕಾನೂನುಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ‘ರಾಜಭವನ ಚಲೋ’ ಹಮ್ಮಿಕೊಂಡಿದ್ದರು. ಪ್ರತಿಭಟನೆಯಲ್ಲಿ ರಾಜ್ಯದ ಮೂಲೆ ಮೂಲೆಯಿಂದ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ಕೈ ಕಾರ್ಯಕರ್ತರು ಭಾಗಿಯಾಗಿದ್ದಾರೆ. ರಾಜದ ಮೂಲೆ ಮೂಲೆಯಿಂದ ಬಂದ ಜನ ಫ್ರೀಡಂ ಪಾರ್ಕ್ ನಿಂದ ರಾಜ ಭವನಕ್ಕೆ ತೆರಳಿದೆ. ಈ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಮಾಜಿ ಸಚಿವ ಜಿ.ಪರಮೇಶ್ವರ್, ರೈತರನ್ನು ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದಾರೆ.

ನೂರಾರು ಕಾರ್ಯಕರ್ತರು ಹಾಗೂ ರೈತರು ರಾಜಭವನಕ್ಕೆ ತೆರಳುತ್ತಿದ್ದ ವೇಳೆ ಮಹಾರಾಣಿ ಕಾಲೇಜ್ ಬಳಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ” ಬಿಜೆಪಿ ಪೊಲೀಸರ ಮೂಲಕ ಶಾಂತಿಯುತವಾಗಿ ನಡೆಯುತ್ತಿದ್ಧ ಪ್ರತಿಭಟನೆಯನ್ನು ಕದಡುವಂತ ಕೆಲಸವನ್ನು ಮಾಡುತ್ತಿದೆ. ದೌರ್ಜನ್ಯ ಮಾಡುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕುವಂತ ಪ್ರಯತ್ನ ನಡೆಯುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ” ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights