ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಬೆಂಕಿ ಅವಘಡ : 5 ಕಾರ್ಮಿಕರು ಸಾವು..!

ಗುರುವಾರ ಮಧ್ಯಾಹ್ನ ಪುಣೆಯ ಮಂಜ್ರಿ ಪ್ರದೇಶದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್‌ಐಐ) ಸ್ಥಾವರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು 5 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2.45 ರ ಸುಮಾರಿಗೆ ಸಂಭವಿಸಿದ ಬೆಂಕಿಯನ್ನು ನಂದಿಸಲು ಹತ್ತು ಅಗ್ನಿಶಾಮಕ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಆಗಮಿಸಿದ್ದರೂ ಐವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸೀರಮ್ ಇನ್ಸ್ಟಿಟ್ಯೂಟ್ ಸ್ಥಾವರದಲ್ಲಿ ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ.

ಸೀರಮ್ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆರಂಭದಲ್ಲಿ ಆರು ಜನರು ಕಟ್ಟಡದೊಳಗೆ ಸಿಕ್ಕಿಬಿದ್ದಿದ್ದರು ಆದರೆ ಅಗ್ನಿಶಾಮಕ ದಳವು ಒಬ್ಬರನ್ನು ರಕ್ಷಿಸಲು ಸಾಧ್ಯವಾಯಿತು ಎಂದು ಮೂಲಗಳು ತಿಳಿಸಿವೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಾದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿದೆ. ಭಾರತದಲ್ಲಿ ತುರ್ತು ಬಳಕೆಯ ಅನುಮೋದನೆ ಪಡೆದ ಎರಡು ಕೋವಿಡ್ -19 ಲಸಿಕೆಗಳಲ್ಲಿ ಕೋವಿಶೀಲ್ಡ್ ಕೂಡ ಒಂದು.

ಕೋವಿಶೀಲ್ಡ್ನ ಉತ್ಪಾದನಾ ಘಟಕ ಸುರಕ್ಷಿತವಾಗಿದೆ ಮತ್ತು ಬೆಂಕಿಯಿಂದ ಯಾವುದೇ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಿ ಬೆಂಕಿ ಕಾಣಿಸಿಕೊಂಡಿತು?
ಕೋವಿಶೀಲ್ಡ್ ಉತ್ಪಾದಿಸುತ್ತಿರುವ ಸ್ಥಾವರಕ್ಕೆ ಪಕ್ಕದಲ್ಲಿಯೇ ಬೆಂಕಿ ಕಾಣಿಸಿಕೊಂಡ ಕಟ್ಟಡ ನಿರ್ಮಾಣ ಹಂತದಲ್ಲಿದೆ. ಬೆಂಕಿಯಿಂದ ಉಂಟಾಗುವ ಹಾನಿಯ ನಿಖರ ಸ್ವರೂಪ ಇನ್ನೂ ತಿಳಿದುಬಂದಿಲ್ಲ.

ನಿರ್ಮಾಣ ಹಂತದಲ್ಲಿರುವ ಕಟ್ಟಡ ಟರ್ಮಿನಲ್ 1ನೇ ಗೇಟ್ ಬಳಿ ಇದೆ.

ಇದು ಸೀರಮ್ ಇನ್‌ಸ್ಟಿಟ್ಯೂಟ್‌ನಲ್ಲಿ ಕೋವಿಡ್‌ಶೈಡ್ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆಯೇ?
ಇಲ್ಲ. ಸೀರಮ್ ಸಂಸ್ಥೆಯಲ್ಲಿ ಇಂದು ಸಂಭವಿಸಿದ ಬೆಂಕಿಯು ಕೋವಿಶೀಲ್ಡ್ ಲಸಿಕೆ ಉತ್ಪಾದನೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೋವಿಡ್ -19 ಲಸಿಕೆಯ ಉತ್ಪಾದನಾ ಘಟಕದ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights