ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 545 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕಳಿದ ವೃಂದಗಳ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) ಒಟ್ಟು 545 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗೆ ಅಗತ್ಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 22 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 22 ಕೊನೆಯ ದಿನವಾಗಿದೆ. ಅಧಿಕೃತ ಬ್ಯಾಂಕ್ ಶಾಖೆ ಅಂಚೆ ಕಚೇರಿಯಲ್ಲಿ ಶುಲ್ಕವನ್ನು ಪಾವತಿಸಲು ಫೆ.24 ಕೊನೆಯ ದಿನವಾಗಿದೆ.

ಶುಲ್ಕ ವಿವರ

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2 (ಬಿ), 3(ಬಿ) ಗೆ ಸೇರಿದ ಅಬ್ಯರ್ಥಿಗಳಿಗೆ 500 ರೂ.ಶುಲ್ಕ ನಿಗದಿಪಡಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 250 ರೂ. ಶುಲ್ಕ ಪಾವತಿಸಬೇಕು ಎಂದು ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ ಕೃಷ್ಣಕಾಂತ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ www.recruitment.ksp.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ಪಡಿತರಿಗೆ ಸಿಗಲಿದೆ ಜೋಳ-ರಾಗಿ; ನೂತನ ಸಚಿವ ಉಮೇಶ್ ಕತ್ತಿ ಭರವಸೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights