ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ನಟಿ ರಾಗಿಣಿಗೆ ಕೊನೆಗೂ ಜಾಮೀನು ನೀಡಿದ ಸುಪ್ರೀಂ ಕೋರ್ಟ್!
ಡ್ರಗ್ಸ್ ಮಾಫಿಯಾದಲ್ಲಿ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿಗೆ ಎಷ್ಟೇ ಪ್ರಯತ್ನ ಪಟ್ಟರೂ ಬಿಡುಗಡೆ ಭಾಗ್ಯ ಮಾತ್ರ ಕೈಗೆಟುಕುತ್ತಿರಲಿಲ್ಲ. ಆದರೆ ಇಂದು ಸುಪ್ರೀಂ ಕೋರ್ಟ್ ನಟಿ ರಾಗಿಣಿಗೆ ಜಾಮೀನು ನೀಡಿದೆ. ಹೀಗಾಗಿ ಕಳೆದ ಒಂದುವರೆ ತಿಂಗಳಿನಿಂದ ಜಾಲುವಾಸ ಅನುಭವಿಸುತ್ತಿದ್ದ ತುಪ್ಪದ ಹುಡುಗಿ ಕೊನೆಗೂ ಹೊರಬಂದಿದ್ದಾಳೆ.
ಹೌದು.. ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದಲ್ಲಿ ನಂಟು ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೊನ್ನೆಯಷ್ಟೇ ತಿರಸ್ಕರಿಸಿತ್ತು.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿತ್ತು. ರಾಗಿಣಿ ವಿರುದ್ಧ ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯಿದೆಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸದ್ಯ ಜೈಲು ಹಕ್ಕಿ ಹೊರ ಹಾರಿಬಂದಿದೆ.