ಸಿದ್ದರಾಮಯ್ಯ-ಡಿಕೆಶಿ ನಿರುದ್ಯೋಗಿಗಳು; ಅದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ: ಸಚಿವ ಆರ್.ಅಶೋಕ್
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗಾಗಗಲೀ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗಾಗಲೀ ಉದ್ಯೋಗ ಇಲ್ಲ. ಅವರಿಬ್ಬರೂ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಉದ್ಯೋಗ ಹುಡುಕುತ್ತಾ ಅಲೆಯುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಗೆ ಬರುತ್ತಿದ್ದ ನೂರಾರು ರೈತರನ್ನು ಮಾರ್ಗ ಮಧ್ಯದಲ್ಲೇ ಪೊಲೀಸರು ಬಂಧಿಸಿದ್ದರು. ಪ್ರತಿಭಟನೆ ನಡೆಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮತ್ತು ಹಲವು ಕಾಂಗ್ರೆಸ್ ಮುಖಂಡರು ಪೊಲೀಸರು ವಶಕ್ಕೆ ಪಡೆದಿದ್ದರು.
ಕಾಂಗ್ರೆಸ್ ಪಕ್ಷದ ಪತ್ರಿಭಟನೆಯ ಬಗ್ಗೆ ಕಿಡಿಕಾರಿರುವ ಆರ್. ಅಶೋಕ್, ಕೃಷಿ ಕಾಯ್ದೆಗಳ ಸುಧಾರಣೆಗಳ ಬಗ್ಗೆ ಹಿಂದೆ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇದ್ದಾಗಲೇ ಪ್ರಾರಂಭ ಆಗಿದ್ದು. ಆದರೆ ಇದರ ಬಗ್ಗೆ ದೇಶದಲ್ಲಿ ಎಲ್ಲೂ ದೊಡ್ಡ ಹೋರಾಟ ಆಗಿಲ್ಲ. ಕಾಂಗ್ರೆಸ್ ನವರಿಗೆ ಏನು ಕೆಲಸ ಇಲ್ಲ. ಹಾಗಾಗಿ ಈಗ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ಆರು ವರ್ಷದಲ್ಲಿ ನರೇಂದ್ರ ಮೋದಿಗೆ ಬಗ್ಗೆ ಆರೋಪ ಮಾಡಲು ಏನು ಸಿಕ್ಕಿಲ್ಲ. ಈಗ ಈ ವಿಷಯವನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬರೀ ಪ್ರತಿಭಟನೆ ಮಾಡುವ ಉದ್ದೇಶದಿಂದಷ್ಟೇ ಪ್ರತಿಭಟನೆ ಮಾಡುತ್ತಿದ್ದಾರೆಯೇ ಹೊರತು. ಇದರಲ್ಲಿ ಯಾವುದೇ ಹುರಳಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ : ಸಿದ್ದರಾಮಯ್ಯ, ಡಿಕೆಶಿ ಖಾಕಿ ವಶಕ್ಕೆ!

