ಪ್ರಧಾನಿಗಾಗಲೇ – ಸುಪ್ರೀಂ ಕೋರ್ಟ್‌ಗಾಗಲೀ ರೈತರ ಟ್ರಾಕ್ಟರ್ ಪರೇಡ್ ತಡೆಯಲು ಸಾಧ್ಯವಿಲ್ಲ: ರೈತ ಮುಖಂಡ
ಕೇಂದ್ರ ಸರ್ಕಾರ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ರೈತರ ಟ್ರ್ಯಾಕ್ಟರ್ ಪರೇಡ್‌ನಲ್ಲಿ ಸುಮಾರು 10 ಲಕ್ಷ ಜನರು ಸಾವಿರಾರು ಟ್ರಾಕ್ಟರುಗಳೊಂದಿಗೆ ಭಾಗವಹಿಸಲಿದ್ದಾರೆ. ರೈತರ ಈ ಪ್ರತಿಭಟನಾ ಮೆರವಣಿಗೆಯನ್ನು ಪ್ರಧಾನಿಯಾಗಿಲೀ ಅಥವಾ ಸುಪ್ರೀಂ ಕೋರ್ಟ್ ಆಗಲೀ ತಡೆಯಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಕಿಸಾನ್ ಸಭಾದ ಅಧ್ಯಕ್ಷ ಅಶೋಕ್ ಧವಾಲೆ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ರೈತರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಧವಾಲೆ, “ರೈತರನ್ನು ಸುಲಿಗೆ ಮಾಡುವ ಕಾರ್ಪೊರೇಟ್‌ಗಳಿಗೆ ಕೃಷಿ ಕ್ಷೇತ್ರವನ್ನು ಒಪ್ಪಿಸಲು ಮುಂದಾಗಿರುವ ಸರ್ಕಾರದ ನೀತಿಗಳ ವಿರುದ್ಧ ಜನವರಿ 26 ರಂದು ಗಣರಾಜ್ಯೋತ್ಸವದ ದಿನ ನವದೆಹಲಿಯಲ್ಲಿ ಬೃಹತ್ ಮೆರವ ನಡೆಯಲಿದೆ. ರೈತರ ಹೋರಾಟ ದಿನಕಳೆದಂತೆ ಬೆಂಬಲ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ, ಮುಖ್ಯವಾಹಿನಿಯ ರಾಜಕೀಯ ಪಕ್ಷಗಳು ಸಹ ರೈತರ ಪ್ರತಿಭಟನೆಯನ್ನು ಬಹಿರಂಗವಾಗಿ ಬೆಂಬಲಿಸುತ್ತಿವೆ. ಜನವರಿ 26 ರಂದು ಮುಂಬಯಿಯ ಆಜಾದ್ ಮೈದಾನದಲ್ಲಿಯೂ ಆಂದೋಲನವನ್ನು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ರೈತ ಹೋರಾಟ; ಪೆರುವಿನ ರೈತರಿಗೆ ಗೆಲವು ಸಿಕ್ಕಂತೆ, ಭಾರತೀಯರು ರೈತರಿಗೂ ಸಿಗಬಹುದೆ?
ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ 50 ದಿನಗಳಿಗಿಂತ ಹೆಚ್ಚು ಕಾಲ ಲಕ್ಷಾಂತರ ರೈತರು ರಾಷ್ಟ್ರ ರಾಜಧಾನಿಯ ಐದು ಗಡಿ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾನೂನುಗಳ ಕುರಿತು ಕೇಂದ್ರದೊಂದಿಗೆ ಮಾತುಕತೆಗಳು ವಿಫಲವಾಗಿವೆ. ಹೀಗಾಗಿ, ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿದ್ದಾರೆ. ಆದರೆ ರಾಜ್‌ಪಾತ್‌ನಲ್ಲಿ ನಡೆಯುವ ಸಾಂಪ್ರದಾಯಿಕ ಮೆರವಣಿಗೆಗೆ ತೊಂದರೆ ನೀಡುವುದಿಲ್ಲ ಎಂದು ರೈತರು ಹೇಳಿದ್ದಾರೆ.
ಗಣರಾಜ್ಯೋತ್ಸವದಂದು ಟ್ರಾಕ್ಟರ್ ರ್ಯಾಲಿ ನಡೆಸದಂತೆ ರೈತರನ್ನು ತಡೆಯಬೇಕು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶ ನೀಡಲು ನಿರಾಕರಿಸಿದ್ದು, ಈವೆಂಟ್ ಅನ್ನು ಹೇಗೆ ನಿಭಾಯಿಸಬೇಕು ಎಂದು ಅದನ್ನು ದೆಹಲಿ ಪೊಲೀಸರು ನಿರ್ಧರಿಸಲಿ ಎಂದು ಹೇಳಿತ್ತು.
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಜೈ ಕಿಸಾನ್ ಆಂದೋಲನ್ ನಾಯಕ ಯೋಗೇಂದ್ರ ಯಾದವ್, “ಪ್ರಸ್ತುತ ಭಾರತದಲ್ಲಿ ಪ್ರಜಾಪ್ರಭುತ್ವವು ತಳಮಳಗೊಂಡಿರುವುದರಿಂದ ಗಣರಾಜ್ಯವನ್ನು ಪುನಃ ಪಡೆದುಕೊಳ್ಳುವ ಹೋರಾಟ ಪ್ರಾರಂಭವಾಗಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಒಂದೂವರೆ ವರ್ಷ ಕೃಷಿ ಕಾಯ್ದೆಗಳ ತಡೆ: ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ರೈತರು!