ವಿದ್ಯಾರ್ಥಿಗಳ ಗಮನಕ್ಕೆ: ಮೇ ತಿಂಗಳಲ್ಲಿ PCU; ಜೂನ್‌ ತಿಂಗಳಲ್ಲಿ SSLC ಪರೀಕ್ಷೆ!

ಮೇ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಜೂನ್ ಮೊದಲ ವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವಂತೆ ಪೋಷಕರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಪಡೆದು ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಕ್ಕಳಿಗೆ ಹೊರೆ ಆಗುವುದನ್ನು ತಡೆಯಲು ಈ ವರ್ಷ ಶೇ 30ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. ಪರೀಕ್ಷೆಗೆ ಕುಳಿತುಕೊಳ್ಳಲು ಕನಿಷ್ಠ ಹಾಜರಾತಿ ನಿಯಮದಿಂದ ವಿನಾಯ್ತಿ ನೀಡಲಾಗಿದೆ. ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಮಕ್ಕಳ ಪೋಷಕರು ಹಾಗೂ ಖಾಸಗಿ ಶಾಲೆ ಶಿಕ್ಷಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಶೀಘ್ರ ಸೂತ್ರವೊಂದನ್ನು ರೂಪಿಸಲಾಗುವುದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದಿಂದ ಖಾಸಗಿ ಶಾಲೆಗಳಿಗೆ ಶುಲ್ಕ ಪಾವತಿಸಲು ಕಷ್ಟಪಡುತ್ತಿದ್ದಾರೆ. ಶುಲ್ಕ ಕಡಿಮೆ ಮಾಡಿಸುವಂತೆ ಇಲಾಖೆಗೆ ಪೋಷಕರು ಅಹವಾಲು ಸಲ್ಲಿಸಿದ್ದಾರೆ. ಇನ್ನೊಂದು ಕಡೆ ಖಾಸಗಿ ಶಾಲೆ ಆಡಳಿತ ಮಂಡಳಿಗಳಿಗೆ ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಕೆಲವು ಕಡೆ ಸಂಬಳ ಸಿಗದೇ ಶಿಕ್ಷಕರು ತರಕಾರಿ ಮಾರಾಟ ಮಾಡಿ ಬದುಕುತ್ತಿದ್ದಾರೆ. ಹೀಗಾಗಿ ಎಲ್ಲರ ಹಿತಾಸಕ್ತಿಯನ್ನು ಇಟ್ಟುಕೊಂಡು ಸೂತ್ರ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗಣಿಗಾರಿಕೆ ತಡೆಯಲು ಸಾಧ್ಯವಿಲ್ಲ; ಅಕ್ರಮವಾಗಿ ನಡೆಸುವವರು ಸಕ್ರಮ ಮಾಡಿಸಿಕೊಳ್ಳಬೇಕು: ಸಿಎಂ ಯಡಿಯೂರಪ್ಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights